ಇತ್ತೀಚೆಗೆ ನಟಿ ರಮ್ಯಾ (Ramya) ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಈ ಘಟನೆಯನ್ನು ಖಂಡಿಸಿ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ ಮತ್ತು ಒಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬೆಳವಣಿಗೆಯು ಈ ರೀತಿಯ ಕೃತ್ಯಗಳಲ್ಲಿ ತೊಡಗಿದವರಿಗೆ ಒಂದು ಎಚ್ಚರಿಕೆಯ ಗಂಟೆಯಾಗಿದೆ.ಈ ಘಟನೆಯು ರಮ್ಯಾ ಅವರು ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ನೀಡಿದ್ದ ಹೇಳಿಕೆಯಿಂದ ಪ್ರಾರಂಭವಾಗಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದಾಗ, “ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಇದೆ” ಎಂದು ಅವರು ಹೇಳಿದ್ದರು.
ಈ ಹೇಳಿಕೆಗೆ ಆಕ್ರೋಶಗೊಂಡ ದರ್ಶನ್ ಅಭಿಮಾನಿಗಳು ರಮ್ಯಾ ಅವರ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಕೆಳಗೆ ಅಶ್ಲೀಲ ಕಮೆಂಟ್‌ಗಳನ್ನು ಮಾಡಿದ್ದರು.ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‍ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ ವೇಳೆ ಮತ್ತೆ ಐದು ಅಕೌಂಟ್‍ಗಳನ್ನು ಸೇರಿಸಿ 48 ಅಕೌಂಟ್‍ಗಳ ಮೇಲೆ ದೂರು ದಾಖಲಿಸಿದ್ದರು. ಎಫ್‍ಐಆರ್ ದಾಖಲಾದ ತಕ್ಷಣ ಬಹುತೇತ ಅಕೌಂಟ್‍ಗಳು ಡಿಲಿಟ್ ಆಗಿದ್ದವು.
ರಮ್ಯಾ ನೀಡಿದ ದೂರಿನ ನಂತರ, ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸಿ, ಸಾಮಾಜಿಕ ಮಾಧ್ಯಮ ಐಡಿಗಳ ಮೂಲಕ ಮೂವರನ್ನು ಪತ್ತೆ ಹಚ್ಚಿದ್ದಾರೆ.ಕೋಲಾರ (Kolar) , ಚಿತ್ರದುರ್ಗ (Chitradurga) ಮೂಲದ ಮೂವರನ್ನು ಬಂಧಿಸಲಾಗಿದೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲ್ ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಅವರ ವಿಳಾಸ ಮತ್ತು ಗುರುತುಗಳನ್ನು ಪರಿಶೀಲಿಸಿ, ಆಗಸ್ಟ್ 1ರಂದು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಈ ಮಧ್ಯೆ, ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರರ ಜಾಮೀನು ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು. ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ತೀರ್ಪನ್ನು 10 ದಿನಗಳ ನಂತರ ಪ್ರಕಟಿಸುವುದಾಗಿ ತಿಳಿಸಿದೆ.
ಈ ಘಟನೆಯ ನಂತರ ನಟಿ ರಮ್ಯಾ ಅವರಿಗೆ ಸಾರ್ವಜನಿಕವಾಗಿ ಮತ್ತು ಚಿತ್ರರಂಗದಿಂದ ಭಾರೀ ಬೆಂಬಲ ವ್ಯಕ್ತವಾಗಿದೆ. ರಾಕ್‌ಲೈನ್ ವೆಂಕಟೇಶ್, ಧ್ರುವಾ ಸರ್ಜಾ, ಲೂಸ್ ಮಾದ ಯೋಗಿ, ವಿನಯ್ ರಾಜ್ ಕುಮಾರ್ ಮತ್ತು ಡಾ. ಶಿವರಾಜ್ ಕುಮಾರ್ ಸೇರಿದಂತೆ ಹಲವು ಗಣ್ಯರು ರಮ್ಯಾ ಪರ ನಿಂತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದವರ ನಡೆಯನ್ನು ಎಲ್ಲರೂ ತೀವ್ರವಾಗಿ ಖಂಡಿಸಿದ್ದಾರೆ.
ಐಪಿಎಸ್ ದಯಾನಂದ್ ಮತ್ತು ಸೀಮಂತ್ ಕುಮಾರ್ ಸಿಂಗ್‌ಗೆ ಪೊಲೀಸ್ ವಿಶಿಷ್ಟ ಸೇವಾ ಪದಕ
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


