ಬೆಂಗಳೂರು: ಕನ್ನಡ ಚಿತ್ರರಂಗದ ಯುವ ನಟ ಸಂತೋಷ್ ಬಾಲರಾಜ್ ಅವರು ಜಾಂಡಿಸ್‌ನಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ನಟ ಸಂತೋಷ್ ಬಾಲರಾಜ್ ಅವರು ಜಾಂಡಿಸ್‌ನಿಂದ ಬಳಲುತ್ತಿದ್ದು, ಎರಡು ದಿನಗಳ ಹಿಂದೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಸಂತೋಷ್ ಬಾಲರಾಜ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸಂತೋಷ್ ಬಾಲರಾಜ್ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂತೋಷ್ ಬಾಲರಾಜ್ ಕರಿಯಾ-2, ಕೆಂಪ, ಗಣಪ, ಸತ್ಯಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕ ನಟಗಾಗಿ ಅಭಿನಯಿಸಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಕನ್ನಡ ಚಿತ್ರರಂಗದ ಕಲಾವಿದರು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಬಿಎಸ್ಎನ್ಎಲ್ ರೂ.1 ಪ್ಲಾನ್: ಕೇವಲ ₹1ಕ್ಕೆ ಆಜಾದಿ ಕಾ ಪ್ಲಾನ್ ನಂಬಲಾಗದ ಕೊಡುಗೆಗಳೊಂದಿಗೆ ಲಭ್ಯ!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


