ದಕ್ಷಿಣ ಕನ್ನಡ: ಈ ಹಿಂದೆ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ ಅನಾಮಧೇಯ ವ್ಯಕ್ತಿಯೊಬ್ಬ ತಾನು ಕೆಲಸ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಅನೇಕ ಕೊಲೆ ಹಾಗೂ ಅತ್ಯಾಚಾರ ಕೊಲೆಗಳು ನಡೆದಿದ್ದು, ಶವಗಳನ್ನು ತಾನೇ ಹೂತಿಟ್ಟಿದ್ದಾಗಿ ಹೇಳಿ ದೂರು ನೀಡಿದ್ದ.
ಆ ದೂರಿನ ಮೇರೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು, ತಂಡ ತನಿಖೆ ಆರಂಭಿಸಿದೆ. ಮೊದಲಿಗೆ ಸ್ಥಳ ಮಹಜರು ನಡೆಸಿದಾಗ 13 ಸ್ಥಳಗಳನ್ನು ಗುರುತಿಸಿದ ಸಾಕ್ಷಿ ದೂರುದಾರ ಇಲ್ಲಿ ಹೆಣಗಳನ್ನು ಹೂತಿರುವುದಾಗಿ ತಿಳಿಸಿದ್ದ. ಅದರಂತೆ ಈ ಜಾಗಗಳಲ್ಲಿ ಕ್ರಮವಾಗಿ ಉತ್ಖನನ ಮಾಡಿದ ಎಸ್‌ಐಟಿ ಅಧಿಕಾರಿಗಳಿಗೆ 6ನೇ ಸ್ಥಳದಲ್ಲಿ 12 ಮೂಳೆಗಳು ಪತ್ತೆಯಾಗಿವೆ.
ಸದ್ಯ 9ನೇ ಸ್ಥಳದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಇನ್ನಷ್ಟು ಮಾಹಿತಿ ಹೊರಬರಬೇಕಿದೆ. ಹೀಗೆ ಭಾರೀ ಕುತೂಹಲ ಹುಟ್ಟುಹಾಕಿರುವ ಈ ಪ್ರಕರಣದ ಬಗ್ಗೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಗಂಭೀರ ಆರೋಪ ಕೇಳಿಬರುತ್ತಿದ್ದು, ಎಸ್‌ಐಟಿ ತಂಡದಲ್ಲಿರುವ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ದೂರುದಾರನಿಗೆ ದೂರು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ದೂರುದಾರನ ಪರ ವಕೀಲರು ಆರೋಪಿಸಿದ್ದು, ನಿನ್ನೆ ( ಆಗಸ್ಟ್ 1 ) ಸಂಜೆ ಮಂಜುನಾಥ್ ಗೌಡ ದೂರುದಾರನ ಬಳಿ ತೆರಳಿ ದೂರು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಈ ಸಮಯದಲ್ಲಿ ದೂರುದಾರನ ವಿಡಿಯೊವನ್ನೂ ಸಹ ಚಿತ್ರೀಕರಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಸದ್ಯ ಕೇಳಿಬರುತ್ತಿರುವ ಈ ಆರೋಪ ಭಾರೀ ಚರ್ಚೆಗೆ ಕಾರಣವಾಗಿದೆ.
ಇಲ್ಲಿಯವರೆಗೂ ತನಿಖೆ ವಿಚಾರದಲ್ಲಿ ಗೌಪ್ಯತೆ ಕಾಪಾಡಿಕೊಂಡು ಸರಿಯಾದ ರೀತಿ ಕಾರ್ಯಾಚರಣೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳಲ್ಲಿ ಓರ್ವನ ವಿರುದ್ಧ ಇಂತಹ ಗಂಭೀರ ಆರೋಪ ಕೇಳಿಬಂದಿದ್ದು, ಸಾರ್ವಜನಿಕರು ಅಂತಹ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್ ವಿರುದ್ಧ ಕಠಿಣ ಕ್ರಮ: ಮೂವರು ವಶಕ್ಕೆ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


