ಈಗ ಧರ್ಮಸ್ಥಳ ಚಲೋ ನಿಮಿತ್ತ ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ ನಡೆಸಿದ್ದ ಬಿಜೆಪಿ ನಾಯಕರು ಇದ್ದಕ್ಕಿದ್ದಂತೆ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಗೆ ಬಿಜೆಪಿಯಲ್ಲೇ ಆಕ್ಷೇಪ ಉಂಟಾಗುತ್ತಿದೆ.ಆದರೆ ವಿಜಯೇಂದ್ರ ಮತ್ತು ಸೌಜನ್ಯ ತಾಯಿ ಪರಸ್ಪರ ಹಲವಾರು ವಿಷಯಗಳನ್ನು ಮಾತನಾಡಿದ್ದಾರೆ.
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಹರೀಶ್ ಪೂಂಜಾ ಸೇರುದಂತೆ ಹಲವು ನಾಯಕರು ಸೌಜನ್ಯಾ ನಿವಾಸಕ್ಕೆ ಭೇಟಿ ನೀಡಿ, ಅವರ ತಾಯಿ ಹಾಗೂ ಕುಟುಂಬದ ಜೊತೆ ಮಾತುಕತೆ ನಡೆಸಿದ್ದಾರೆ. ಸೌಜನ್ಯ ಪರ ಹೋರಾಟದಲ್ಲಿ ಜತೆಗಿರುವುದಾಗಿ ಭರವಸೆ ನೀಡಿದರು. ಆಗ ಸೌಜನ್ಯ ತಾಯಿ ವಿಜಯೇಂದ್ರ ಮುಂದೆ, ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ತಾಯಿ ಕುಸುಮಾವತಿ ಕಣ್ಣೀರು ಹಾಕಿದ್ದಾರೆ.
ಈ ಪ್ರಕರಣದ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರೆ, ಅದರ ಸಂಪೂರ್ಣ ಖರ್ಚು- ವೆಚ್ಚಗಳ ಜವಾಬ್ದಾರಿಯನ್ನು ಬಿಜೆಪಿ ವಹಿಸಿಕೊಳ್ಳಲಿದೆ. ಜೊತೆಗೆ, ಕಾನೂನು ಹೋರಾಟಕ್ಕೆ ಅಗತ್ಯ ಸಹಕಾರವನ್ನು ನೀಡಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಸೌಜನ್ಯ ನಿವಾಸಕ್ಕೆ ಭೇಟಿ ನೀಡುವುದು ವಿಚಾರವೇ ಆಗಿರಲಿಲ್ಲ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಹೋರಾಟ ನಡೆಸುತ್ತಿರುವ ಪಕ್ಷದ ನಾಯಕರೇ ಈಗ ಏಕಾಏಕಿ ಸೌಜನ್ಯ ನಿವಾಸಕ್ಕೆ ಭೇಟಿ ಕೊಡುವ ಅಗತ್ಯವೇನಿತ್ತು? ಎಂದು ಪಕ್ಷದ ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


