Monday, August 31, 2026
spot_img
More
    spot_img
    HomeLatest newsಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಹೆಸರು ಇನ್ನು ನೆನಪು ಮಾತ್ರ

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಹೆಸರು ಇನ್ನು ನೆನಪು ಮಾತ್ರ

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಹೆಸರು ಇನ್ನು ನೆನಪು ಮಾತ್ರ. ಬಿಬಿಎಂಪಿ ಕೇಂದ್ರ ಕಚೇರಿ ಇನ್ನು ಮುಂದೆ ಜಿಬಿಎ ಕೇಂದ್ರ ಕಚೇರಿಯಾಗಿ ಕಾರ್ಯನಿರ್ವಹಿಸಲಿದೆ. ಬೆಳೆಯುತ್ತಿರುವ ಬೆಂಗಳೂರು ನಗರ ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಎಂದು ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿದೆ.

    Advertisement

    ಜಿಬಿಎ ಅಡಿಯಲ್ಲಿ 5 ಪಾಲಿಕೆಗಳು ಕಾರ್ಯನಿರ್ವಹಿಸಲಿವೆ.ಪ್ರತಿ ಪಾಲಿಕೆಗೆ ಎರಡು ವಲಯಗಳಂತೆ 10 ವಲಯಗಳನ್ನು ರಚಿಸಲಾಗಿದೆ. ಪ್ರತಿ ಪಾಲಿಕೆಗಳಿಗೆ ವಿಧಾನಸಭಾ ಕ್ಷೇತ್ರಗಳ ಹಂಚಿಕೆ ಮಾಡಲಾಗಿದೆ. ಒಂದೇ ವಿಧಾನಸಭಾ ಕ್ಷೇತ್ರದ ವಾರ್ಡ್ ಗಳು ಬೇರೆ ಬೇರೆ ಪಾಲಿಕೆ ವ್ಯಾಪ್ತಿಗೆ ಸೇರಿವೆ.

    ಬೆಂಗಳೂರು ನಗರ ಕೇಂದ್ರ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ, ಬೆಂಗಳೂರು ದಕ್ಷಿಣ, ಬೆಂಗಳೂರು ಪಶ್ಚಿಮ ನಗರಪಾಲಿಕೆ ಸೇರಿ 5 ಪಾಲಿಕೆ ರಚನೆ ಮಾಡಲಾಗಿದ್ದು, ಸದ್ಯ ಇರುವ ವಾರ್ಡ್ ಗಳೇ ಜಿಬಿಎ ನಲ್ಲೂ ಮುಂದುವರೆಯಲಿವೆ.

    ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಲ್ಲಿ ಕೈಗೊಳ್ಳಲಾಗುವ ಚುನಾವಣೆಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಿ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ನಗರ ಪಾಲಿಕೆಯ ವಾರ್ಡ್‌ಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವವರ ವೆಚ್ಚದ ಮಿತಿಯನ್ನು 5 ಲಕ್ಷ ರು.ಗೆ ನಿಗದಿಪಡಿಸಿ, ಚುನಾವಣೆ ನಡೆಯುವ ಸಂದರ್ಭದಲ್ಲಿ ನಕಲಿ ಮತದಾರರ ಕುರಿತಂತೆ ದೂರು ಬಂದಾಗ ಕೈಗೊಳ್ಳಬೇಕಾದ ಕ್ರಮಗಳು ಸೇರಿದಂತೆ ಮತ್ತಿತರ ಅಂಶಗಳು ಅಧಿಸೂಚನೆ ಒಳಗೊಂಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading