Tuesday, March 24, 2026
spot_img
More
    spot_img
    HomeLatest newsಕೆ.ಎನ್ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ : ಎಚ್.ಸಿ ಬಾಲಕೃಷ್ಣ

    ಕೆ.ಎನ್ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ : ಎಚ್.ಸಿ ಬಾಲಕೃಷ್ಣ

    ಹೈಕಮಾಂಡ್ ಸೂಚನೆಯಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಎನ್ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಹೇಳಿದ್ದಾರೆ.

    ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಎಂಬ ಮಾತಿದೆ ಕೆಎನ್ ರಾಜಣ್ಣ ತಮ್ಮ ಮಾತಿನಿಂದಲೇ ಕೆಟ್ಟು ಹೋದರು. ಸುಮ್ಮನೆ ಪಕ್ಷದ ಮೇಲೆ ಗೂಬೆ ಕೂರಿಸಲು ಪಿತೂರಿ ನಡೆಯುತ್ತಿದೆ. ರಾಜಣ್ಣ ಯಾರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಯಲಿದೆ.ಬೇರೆ ಬೇರೆ ಪಕ್ಷದ ನಾಯಕರಾದ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ. ನಮ್ಮ ಸರ್ಕಾರ ಇದೆ ಎಂದು ಪಕ್ಷದಲ್ಲಿ ಇದ್ದಾರೆ.ಇಲ್ಲದಿದ್ದರೆ ಇಷ್ಟೊತ್ತಿಗೆ  ಪಕ್ಷ ಬಿಟ್ಟು ಹೋಗುತ್ತಿದ್ದರು . ಈಗಾಗಲೇ ರಾಜಣ್ಣ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದಾರೆ ಎಂದರು ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ .

    ಸಚಿವ ಸಂಪುಟದಿಂದ ವಜಾಗೊಂಡ ರಾಜಣ್ಣ ಸದ್ಯ ಸೈಲೆಂಟ್ ಆಗಿದ್ದಾರೆ. ಆದರೆ ತೆರೆಮರೆಯಲ್ಲಿ ಏನೆಲ್ಲಾ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎಂಬುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ತನ್ನ ಮುಂದಿನ ಹೆಜ್ಜೆಯ ಬಗ್ಗೆ ಅವರು ಯಾವುದೇ ಸುಳಿವನ್ನು ಬಿಟ್ಟುಕೊಟ್ಟಿಲ್ಲ. ರಾಜಣ್ಣ ಬಿಜೆಪಿ ಸೇರುತ್ತಾರೊ ಅಥವಾ ಕಾಂಗ್ರೆಸ್ ನಲ್ಲೆ ಇರುತ್ತಾರೊ ಕಾದು ನೋಡಬೇಕು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್! ರೂಪಾಯಿ ಕುಸಿತ—ಮೊದಲ ಬಾರಿಗೆ ₹93 ದಾಟಿದ ಡಾಲರ್, ಆರ್ಥಿಕತೆಗೆ ಶಾಕ್!

    “ರೂಪಾಯಿ ಕುಸಿತ 93” ಇದೀಗ ದೇಶದ ಆರ್ಥಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ, ಭಾರತೀಯ ರೂಪಾಯಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು ₹93 ಗಡಿ...

    ತೆಲಂಗಾಣ ಬಜೆಟ್ 2026: ಆರೋಗ್ಯ ಕ್ಷೇತ್ರಕ್ಕೆ ಭಾರೀ ಉತ್ತೇಜನ—₹1286 ಕೋಟಿ ಹೆಚ್ಚಳ!

    “ತೆಲಂಗಾಣ ಆರೋಗ್ಯ ಬಜೆಟ್ 2026” ಈಗ ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ದೊಡ್ಡ ಮಟ್ಟದ ಹೂಡಿಕೆ ಮಾಡಿದ್ದು, ಹೆಚ್ಚುವರಿ ₹1286 ಕೋಟಿ ಅನುದಾನ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading