ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಶಿವಣ್ಣ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಿನ್ನೆ ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಶೋಭಿತಾ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.
ಕಳೆದ 2 ವರ್ಷಗಳ ಹಿಂದೆ ಹಾಸನ ಮೂಲದ ಶೋಭಿತಾ ಮದುವೆಯಾಗಿ ಹೈದರಾಬಾದ್‌ನಲ್ಲಿ ಸೆಟಲ್ ಆಗಿದ್ದರು.
ಬಣ್ಣದ ಲೋಕದಿಂದ ಅವರು ಅಂತರ ಕಾಯ್ಡುಕೊಂಡಿದ್ದರು. ಇದೀಗ ಶೋಭಿತಾ ಆತ್ಮಹತ್ಯೆಗೆ ಸುದ್ದಿ ಕೇಳುತ್ತಿದ್ದಂತೆ ಕುಟುಂಬಸ್ಥರು ಫುಲ್ ಶಾಕ್ ಆಗಿದ್ದಾರೆ.
ಮರಣೋತ್ತರ ಪರೀಕ್ಷೆಯ ನಂತರ ಶೋಭಿತಾ ಮೃತದೇಹವನ್ನು ಬೆಂಗಳೂರಿಗೆ ತರುವ ಸಾಧ್ಯತೆಯಿದೆ.
ಇನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಟಿ ನಗು ನಗುತ್ತಾ ಇರುವ ಚೆಂದದ ಫೋಟೋವೊಂದನ್ನು ಶೇರ್ ಮಾಡಿದ್ದಾರೆ.
ಆ ನಂತರ ಈ ಘಟನೆ ಜರುಗಿದ್ದು, ಅವರ ಆತ್ಮಹತ್ಯೆಯ ಬಗ್ಗೆ ನಿಖರ ಕಾರಣ ತಿಳಿದು ಬರಬೇಕಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


