ಬೆಂಗಳೂರು: ಬಿಜೆಪಿಯೊಳಗಿನ ಬಣದ ಕಿತ್ತಾಟ ಜೋರಾಗಿದ್ದು, ಕೊನೆಗೂ ಹೈಕಮಾಂಡ್ ಮಧ್ಯಪ್ರವೇಶಿಸಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಹೈಕಮಾಂಡ್ ನೋಟಿಸ್ ನೀಡಿ ಬಿಗ್ ಶಾಕ್ ನೀಡಿದೆ.
ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಯತ್ನಾಳ್‌ಗೆ ನೋಟಿಸ್ ಹೊರಡಿಸಲಾಗಿದೆ. ಯತ್ನಾಳ್ ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಹೈಕಮಾಂಡ್ ಕೇಳಿದೆ.
ಈ ಮೂಲಕ ರಾಜ್ಯ ಬಿಜೆಪಿ ನಾಯಕರ ಭಿನ್ನಮತಕ್ಕೆ ತೆರೆ ಎಳೆಯಲು ಹೈಕಮಾಂಡ್ ಮಧ್ಯಪ್ರವೇಶ ಮಾಡಿದೆ.
ವಕ್ಫ್ ವಿರುದ್ಧ ಹೋರಾಟ ನಡೆಸುತ್ತಿರುವ ಯತ್ನಾಳ್ ಬಣ ವಿಜಯೇಂದ್ರ ಪದಚ್ಯುತಿಗೆ ಒತ್ತಾಯಿಸಿದೆ. ಇತ್ತ ವಿಜಯೇಂದ್ರ ಬೆಂಬಲಕ್ಕೆ ನಿಂತಿರುವ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬಣ ಯತ್ನಾಳ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಉಚ್ಛಾಟನೆ ಮಾಡುವಂತೆ ಪಟ್ಟು ಹಿಡಿದಿದೆ.
ಇನ್ನು ವಿಜಯೇಂದ್ರ ಬಣ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಂಡಿದೆ. 50 ಮಾಜಿ ಶಾಸಕರು ನಮ್ಮ ಬಣದಲ್ಲಿದ್ದಾರೆ ಎಂದು ವಿಜಯೇಂದ್ರ ಬಣದ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


