ಬೆಂಗಳೂರು: ಡಿಸೆಂಬರ್.5ರಂದು ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ನೇತೃತ್ವದಲ್ಲಿಯೇ ಕಾಂಗ್ರೆಸ್ ಪಕ್ಷ ವಹಿಸಿಕೊಳ್ಳಲಿದೆ ಎಂದರು.
ನಮ್ಮ ಪಕ್ಷದ ವತಿಯಿಂದ ಸಚಿವರುಗಳು, ಜಿಲ್ಲಾ ಮಂತ್ರಿಗಳು ಸಮಾವೇಶದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಮಾವೇಶಕ್ಕೆ ಅನೇಕ ಸಂಘಟನೆಗಳು ಸಮುದಾಯಗಳು ಬೆಂಬಲ ಸೂಚಿಸಿವೆ. ಇವರ ಬೆಂಬಲವನ್ನು ನಾವು ಸ್ವೀಕಾರ ಮಾಡಿದ್ದೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ನಾಲ್ಕು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದೆ. ಸಿಎಂ ಸಹ ದೆಹಲಿ ಪ್ರವಾಸದಲ್ಲಿದ್ದರು. ದೇಶದಲ್ಲಾಗುವ ವಿದ್ಯಾಮಾನ ಹಾಗೂ ಸಂವಿಧಾನ ರಕ್ಷಣೆಗೆ ಕಾರ್ಯಕ್ರಮ ರೂಪಿಸಲು ಹೈಕಮಾಂಡ್ ಸೂಚನೆ ನೀಡಿದೆ. ಆದ್ದರಿಂದ ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದೇವೆ. ಸಮಾವೇಶಕ್ಕೆ ಪಕ್ಷದ ಎಲ್ಲಾ ನಾಯಕರಿಗೂ ಆಹ್ವಾನ ನೀಡಲಾಗಿದೆ. ಈ ಸಮಾವೇಶಕ್ಕೆ ಎಲ್ಲರೂ ಭಾಗವಹಿಸಬೇಕು. ಸಮಾವೇಶ ಯಶಸ್ವಿಯಾಗುವಂತೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


