ಬೆಂಗಳೂರು: ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಸಚಿವ ಭೈರತಿ ಸುರೇಶ್ ಕಚೇರಿ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಈ ಮೂಲಕ ಭೈರತಿ ಸುರೇಶ್‌ಗೆ ಬಿಗ್ ಶಾಕ್ ಎದುರಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಇಡಿ ತನಿಖೆ ಚುರುಕಾಗುತ್ತಿದ್ದು, ವಿಧಾನಸೌಧದ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ
ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸಚಿವ ಬೈರತಿ ಸುರೇಶ್ ಅವರ ಕಚೇರಿಯ ಸಿಬ್ಬಂದಿ ನಾಳೆ ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಇಡಿ ಕಚೇರಿಗೆ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಮುಡಾ ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಹಿನ್ನೆಲೆಯಲ್ಲಿ ಕಾರ್ಯದರ್ಶಿಗೆ ನೋಟಿಸ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


