ತುಮಕೂರು: ಯಾವುದೇ ರಾಜ್ಯ ಅಥವಾ ದೇಶ ಅಭಿವೃದ್ಧಿ ಆಗಲು ಹಳ್ಳಿ ಹಾಗೂ ಜಿಲ್ಲೆಗಳ ಅಭಿವೃದ್ಧಿ ಆಗಬೇಕು. ನಾವು ಒಕ್ಕೂಟದ ವ್ಯವಸ್ಥೆಯಲ್ಲಿದ್ದೇವೆ. ಪರಸ್ಪರ ಹೊಂದಾಣಿಕೆಯಿಂದ ಆಡಳಿತ ನಡೆಸಬೇಕು. ರಾಜ್ಯದ ಅಭಿವೃದ್ಧಿ ಆದಾಗ ಮಾತ್ರ ದೇಶದ ಜಿಡಿಪಿ ಅಭಿವೃದ್ಧಿ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಕಲ್ಪತರು ನಾಡು ತುಮಕೂರಿನಲ್ಲಿ ಮಾತನಾಡಿದ ಅವರು, ನಾವು ದಲಿತರು, ಬಡವರು ಹಾಗೂ ಎಲ್ಲಾ ವರ್ಗದ ಜನರಿಗೆ ಆರ್ಥಿಕ ಶಕ್ತಿ ತುಂಬಬೇಕು. ಅಂಬೇಡ್ಕರ್ ವಾದದಂತೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಕೊಡಬೇಕು. ಆಗ ಮಾತ್ರ ಅಭಿವೃದ್ಧಿ ಸಾಧ್ಯ. ಹಾಗಾಗಿ ನಾವು ಬಡವರ ಪರ ಕಾರ್ಯಕ್ರಮ ಮಾಡುತ್ತೇವೆ. ಈ ಕಾರ್ಯಕ್ರಮ ಜಾರಿ ಮಾಡುವಾಗ ಪಕ್ಷ, ಜಾತಿ, ಧರ್ಮ ನೋಡಿ ಮಾಡಿಲ್ಲ ಎಂದರು.
ಇನ್ನು ಶಕ್ತಿ ಯೋಜನೆ ಜಾರಿ ಮಾಡುವಾಗ ಯಾವ ಭೇದ-ಭಾವ ಇಲ್ಲದೇ ಮಾಡಿದ್ದೇವೆ. ಬಡವರಿಗೆ ಸಾಮಾಜಿಕವಾಗಿ ಶಕ್ತಿ ತುಂಬಿದ್ದೇವೆ. ಸಮ ಸಮಾಜ ನಿರ್ಮಾಣಕ್ಕೆ ಇದು ಸಹಕಾರಿಯಾಗಲಿದೆ ಎಂದರು.
ಸಂಪತ್ತು ಹೆಚ್ಚು ಕ್ರೋಢೀಕರಣ ಮಾಡಿ ಗ್ಯಾರಂಟಿ ಕೊಡುತ್ತೇವೆ. ಜಿಡಿಪಿಯಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮುಂದಿದೆ. ನಮ್ಮ ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ. ಅದಕ್ಕೆ ಜಿಡಿಪಿ ಸಾಕ್ಷಿಯಾಗಿದೆ ಎಂದು ಮಾಹಿತಿ ನೀಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


