Tuesday, November 3, 2026
spot_img
More
    spot_img
    HomeBreaking NewsBreakfast Meeting: ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸಿದ್ದರಾಮಯ್ಯ

    Breakfast Meeting: ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸಿದ್ದರಾಮಯ್ಯ

    ಕರ್ನಾಟಕದ ರಾಜಕೀಯದಲ್ಲಿ ಮತ್ತೊಂದು ಹೈ ವೋಲ್ಟೇಜ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಉಪಹಕಾರಕ್ಕೆ ಆಗಮಿಸಿದ್ದಾರೆ.

    ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಮಂಗಳವಾರ ಬೆಳಗ್ಗೆ 9.40ಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು. ಡಿ.ಕೆ.ಶಿವಕುಮಾರ್ ಉಪಹಾರ ಕೂಟಕ್ಕೆ ಸಿದ್ದರಾಮಯ್ಯ ಅವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದರು.

    ಶನಿವಾರ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮೊದಲ ಉಪಹಾರಕೂಟ ನಡೆಸಿದ್ದರು. ಮಂಗಳವಾರ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ 2ನೇ ಉಪಹಾರಕೂಟ ನಡೆಯುತ್ತಿದೆ. ರಾಜ್ಯ ರಾಜಕೀಯದಲ್ಲಿ ಈ ಉಪಹಾರಕೂಟ ಭಾರೀ ಚರ್ಚೆಗೆ ಕಾರಣವಾಗಿದೆ.

    ಸಿದ್ದರಾಮಯ್ಯ ನಿವಾಸದಲ್ಲಿ ಉಭಯ ನಾಯಕರು ಕೇಸರಿಬಾತ್, ಇಡ್ಲಿ, ಉಪ್ಪಿಟ್ಟು, ಚಟ್ನಿ, ಸಾಂಬಾರ್, ಕಾಫಿ ಸವಿದಿದ್ದರು. ಆದರೆ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಇಂದು ನಾಟಿ ಕೋಳಿ ಸಾರಿನ ವ್ಯವಸ್ಥೆ ಮಾಡಲಾಗಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವಿನ ಈ 2ನೇ ಉಪಹಾರ ಕೂಟ ಸಹ ಕುತೂಹಲಕ್ಕೆ ಕಾರಣವಾಗಿದೆ.

    ಶನಿವಾರದ ಉಪಹಾರಕೂಟದ ಬಳಿಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದರು. ಸಿದ್ದರಾಮಯ್ಯ ಮಾತನಾಡಿ, “ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲೀ ಯಾರೂ ನಮ್ಮ ಸರ್ಕಾರದ ವಿರುದ್ಧವಿಲ್ಲ” ಎಂದು ಹೇಳಿದ್ದರು.

    ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಗೊಂದಲದ ನಡುವೆ ಹೈಕಮಾಂಡ್ ನಾಯಕರ ಸೂಚನೆಯಂತೆ ಸಿದ್ದರಾಮಯ್ಯ ನಿವಾಸದಲ್ಲಿಉಪಹಾರಕೂಟ ನಡೆದಿತ್ತು. ಮಂಗಳವಾರ ಡಿ.ಕೆ.ಶಿವಕುಮಾರ್ ಸಿದ್ದರಾಮಯ್ಯ ಅವರನ್ನು ತಮ್ಮ ನಿವಾಸಕ್ಕೆ ಉಪಹಾರಕ್ಕೆ ಆಹ್ವಾನಿಸಿದ್ದರು. ಸಿದ್ದರಾಮಯ್ಯ ಜೊತೆ ಯಾವುದೇ ಸಚಿವರಾಗಲಿ, ಶಾಸಕರಾಗಲಿ ಆಗಮಿಸಿಲ್ಲ.

    ಡಿಸೆಂಬರ್ 8ರಿಂದ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿದೆ. ಆದ್ದರಿಂದ ಪ್ರತಿಪಕ್ಷಗಳ ತಂತ್ರಗಳಿಗೆ ಪ್ರತಿತಂತ್ರ ರೂಪಿಸಲು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಂದು ಉಪಹಾರಕೂಟಕ್ಕೆ ಸೇರಿದ್ದಾರೆ. ಅಧಿವೇಶನದ ಕುರಿತು ಉಭಯ ನಾಯಕರು ಚರ್ಚೆ ನಡೆಸುವ ನಿರೀಕ್ಷೆ ಇದೆ.

    ಯಾವುದೇ ಭಿನ್ನಾಭಿಪ್ರಾಯವಿಲ್ಲ: “ಪಕ್ಷದ ವರಿಷ್ಠರ ಸೂಚನೆಯಂತೆ ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

    ಡಿ.ಕೆ.ಶಿವಕುಮಾರ್ ಮಾತನಾಡಿ, “ಹೈಕಮಾಂಡ್‌ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ. ರಾಜಕೀಯವಾಗಿ ನಮ್ಮಿಬ್ಬರದ್ದೂ ಒಂದೇ ತೀರ್ಮಾನ. ಹೈಕಮಾಂಡ್‌ ಹೇಳಿದಂತೆ ಹಿಂದೆಯೂ ಕೆಲಸ ಮಾಡಿಕೊಂಡು ಬಂದಿದ್ದೇವೆ, ಮುಂದೆಯೂ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ, ಇರೋದು ಒಂದೇ ಗುಂಪು ಅದು ಕಾಂಗ್ರೆಸ್‌ ಗುಂಪು. ಗುಂಪುಗಾರಿಕೆಗೆ ಹಿಂದೆಯೂ ಅವಕಾಶ ಕೊಡಲಿಲ್ಲ, ಈಗಲೂ ಕೊಡಲ್ಲ, ಅದರ ಅವಶ್ಯಕತೆಯೂ ಇಲ್ಲ. ಹೈಕಮಾಂಡ್‌ ಹೇಳಿದಂತೆ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡುತ್ತೇವೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ” ಎಂದು ತಿಳಿಸಿದ್ದರು.

    ಅಧಿಕಾರ ಹಂಚಿಕೆ ಗೊಂದಲದ ಕುರಿತು ಮಾತನಾಡಿದ್ದ ಸಿದ್ದರಾಮಯ್ಯ, “ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವಂತೆ ಹೈಕಮಾಂಡ್‌ನವರು ಸೂಚಿಸಿದ್ದಾರೆ. ಈಗಲೂ ಯಾವ ಗೊಂದಲ ಇಲ್ಲ, ನಾಳೆಯೂ ಯಾವುದೇ ಗೊಂದಲ ಇರುವುದಿಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು. ಆದರೆ ಗೊಂದಲ ಸೃಷ್ಟಿಯಾಗಿರುವುದು ಕೆಲವು ಮಾಧ್ಯಮಗಳಿಂದ” ಎಂದು ದೂರಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search