ನವದೆಹಲಿ: ಸಿಎಂ-ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮಾಯಿ ವ್ಯಂಗ್ಯವಾಡಿದ್ದಾರೆ.
ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ಹೊರಬೀಳಲಿದೆ. ಇವರಿಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದರೆ ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ? ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ಜನರ ಇಚ್ಛೆಯಾಗಿದೆ ಎಂದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಯಿತು. ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಗೊಂದಲ ನಿವಾರಿಸುವಲ್ಲಿ ವಿಫಲವಾಗಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಿದೆ ಕಾಂಗ್ರೆಸ್ ಹೈಕಮಾಂಡ್, ಯಾರು ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ತಮ ಮೇಲೆ ಹೈಕಮಾಂಡ್ ಇದೆ ಎಂದು ಹೇಳಿದ ಮೇಲೆ ಹೈಕಮಾಂಡ್‍ಗೆ ಏನು ಅರ್ಥ ಇದೆ. ಇದು ಒಂದು ಕುಟುಂಬದ ವಿಷಯ ಆಗಿದೆ ಎಂದು ಬೊಮಾಯಿ ಉತ್ತರಿಸಿದರು.
ಯುವಕನಿಂದ ಲೈಂಗಿಕ ಕಿರುಕುಳ: ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮಹತ್ಯೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


