Tuesday, November 3, 2026
spot_img
More
    spot_img
    HomeLatest newsರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಪೋಟ: ದೆಹಲಿಯಲ್ಲಿ ಬೀಡುಬಿಟ್ಟ ಬಿಜೆಪಿ ಶಾಸಕರು

    ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಪೋಟ: ದೆಹಲಿಯಲ್ಲಿ ಬೀಡುಬಿಟ್ಟ ಬಿಜೆಪಿ ಶಾಸಕರು

    ಬೆಂಗಳೂರು: ಮನೆಯೊಂದು ಮೂರು ಬಾಗಿಲು ಎಂಬಂತಾಗಿರುವ ಪ್ರತಿಪಕ್ಷ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿರುವ ಬೆನ್ನಲ್ಲೇ ಭಿನ್ನಮತೀಯರ ಬಣ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಲು ಮುಂದಾಗಿದೆ.

    ಬಿಜೆಪಿಯ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವವರಾದ ಕುಮಾರ್ ಬಂಗಾರಪ್ಪ , ಸೀಮಂತ್ ಪಾಟೀಲ್, ಮಾಜಿ ಸಂಸದ ಬಿ.ವಿ.ನಾಯಕ್, ಎನ್.ಆರ್.ಸಂತೋಷ್ ಸೇರಿದಂತೆ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಯಾವುದೇ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿ ಘಟಕಕ್ಕೆ ದೆಹಲಿ ವರಿಷ್ಠರು ಅಧ್ಯಕ್ಷರ ನೇಮಕಾತಿ ಆದೇಶವನ್ನು ಘೋಷಣೆ ಮಾಡಲಿದ್ದಾರೆ ಎಂಬ ಸುಳಿವು ಸಿಕ್ಕ ಹಿನ್ನಲೆಯಲ್ಲಿ ಭಿನ್ನಮತೀಯರು ದೆಹಲಿಯಲ್ಲಿ ವಾಸ್ತವ್ಯ ಹೂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿವೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಲು ಒಪ್ಪದಿರುವ ಈ ಬಣ ಅಧ್ಯಕ್ಷ ಸ್ಥಾನವನ್ನು ತಮ ಬಣಕ್ಕೆ ನೀಡಬೇಕೆಂಬ ಬೇಡಿಕೆಯನ್ನು ಸಲ್ಲಿಸಲಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಲು ಸಮಯ ಅವಕಾಶವನ್ನು ಕೇಳಲಾಗಿದೆ. ಆದರೆ ಸಂಸತ್ ನಡೆಯುತ್ತಿರುವ ಸಂದರ್ಭದಲ್ಲಿ ಭೇಟಿಗೆ ಅವಕಾಶ ಸಿಗುತ್ತದೆಯೇ ಎಂಬುದು ಖಚಿತಪಟ್ಟಿಲ್ಲ.ಮೂಲಗಳ ಪ್ರಕಾರ ದೆಹಲಿಯಲ್ಲಿ ಗೃಹಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಕರ್ನಾಟಕದ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆಂದು ಗೊತ್ತಾಗಲಿದೆ.

    ಈಗಾಗಲೇ ಬಿಜೆಪಿಯ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟನೆಗೊಂಡಿರುವ ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪುನಃ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆಯೂ ವರಿಷ್ಠರಿಗೆ ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

    ವಿಜಯೇಂದ್ರ ರಾಜ್ಯಾಧ್ಯಕ್ಷರಾಗುವುದನ್ನು ಶತಾಯಗತಾಯ ತಪ್ಪಿಸಲು ತಮೆಲ್ಲ ಪ್ರಯತ್ನವನ್ನು ಮುಂದುವರೆಸಿರುವ ಭಿನ್ನಮತೀಯರು ಅವರನ್ನೇ ಅಧ್ಯಕ್ಷರನ್ನಾಗಿ ಮುಂದುವರೆಸುವ ತೀರ್ಮಾನದ ಬಗ್ಗೆ ಮರು ಆಲೋಚನೆ ಮಾಡಿ ಎಂದು ಕೋರಿಕೊಂಡಿದ್ದಾರೆ. ಆದರೆ ಕರ್ನಾಟಕದ ಬೆಳವಣಿಗೆಗಳ ಬಗ್ಗೆ ತಮದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುವ ದೆಹಲಿ ನಾಯಕರು ಇವರ ಬೇಡಿಕೆಯನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳುವ ಸಾಧ್ಯತೆಗಳು ಇಲ್ಲ ಎಂದು ಹೇಳಲಾಗುತ್ತಿದೆ.

    ಪಕ್ಷದ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು. ನಾವು ವಿಜಯೇಂದ್ರ ಅವರನ್ನು ಪೂರ್ಣಾವಧಿಗೆ ಮುಂದುವರೆಸುತ್ತೇವೆ. ಇಲ್ಲವೇ ಬೇರೊಬ್ಬರಿಗೆ ಅವಕಾಶ ಕೊಡುತ್ತೇವೆ ಎಂಬುದರ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಅಂತಿಮವಾಗಿ ಪಕ್ಷ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೇ ಅದಕ್ಕೆ ಬದ್ದರಾಗಲೇಬೇಕೆಂದು ಕಟ್ಟುನಿಟ್ಟಿನ ಸೂಚನೆ ಕೊಡುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ.

    ಯುವಕನಿಂದ ಲೈಂಗಿಕ ಕಿರುಕುಳ: ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮಹತ್ಯೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search