Saturday, September 5, 2026
spot_img
More
    spot_img
    HomeLatest newsBreakfast Meeting: ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮೀಟಿಂಗ್ ಕಥೆ

    Breakfast Meeting: ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮೀಟಿಂಗ್ ಕಥೆ

    ಕರ್ನಾಟಕದಲ್ಲಿ ಮಂಗಳವಾರ ಮತ್ತೆ Breakfast Meeting  ಚರ್ಚೆ. ರಾಜ್ಯ ರಾಜಕೀಯದಲ್ಲಿ ಮತ್ತೊಂದು ಹೈ ವೋಲ್ಟೇಜ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಉಪಹಕಾರ ಮಾಡಿದರು.

    Advertisement

    ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸಿದ್ದರಾಮಯ್ಯ ಬಿಸಿ ಬಿಸಿ ಇಡ್ಲಿ, ನಾಟಿಕೋಳಿ ಸಾರು ಸವಿದರು. ಡಿ.ಕೆ.ಸುರೇಶ್, ಕುಣಿಗಲ್ ಶಾಸಕ ರಂಗನಾಥ್ ಈ ಸಮಯದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆಗಿದ್ದರು.

    ಶನಿವಾರ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದಿತ್ತು. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಉಪಹಾರ ಸವಿದಿದ್ದರು. ಇಂದು ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಉಪಹಾರಕೂಟ ನಡೆದಿತ್ತು.

    ಮಂಗಳವಾರದ ಉಪಹಾರಕೂಟದ ಕುರಿತು ಕರ್ನಾಟಕ ಜೆಡಿಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದೆ. Breakfast Meeting  ಕಥೆಯನ್ನು ಹೇಳಿದೆ.

    ಜೆಡಿಎಸ್ ಪಕ್ಷದ ಪೋಸ್ಟ್

    ಡಮ್ಮಿ ಸಿಎಂ ಸಿದ್ದರಾಮಯ್ಯ

    ಕುರ್ಚಿ ಆಸೆಗೆ ಡಿ.ಕೆ.ಶಿವಕುಮಾರ್ ಜೊತೆ ಸೆಟಲ್‌ಮೆಂಟ್‌ಗೆ ಬಂದ ಸಿದ್ದಹಸ್ತ !

    ಸಿದ್ದರಾಮಯ್ಯ : ಶಿವಕುಮಾರ್ ಈಗ್ಲೂ ನೀನೇ ಸೂಪರ್ ಸಿಎಂ ಕಣಯ್ಯ. ನೀನೆಷ್ಟೆ ಕಮಿಷನ್‌ ತಗೊಂಡ್ರು ನಾನ್ಯಾವತ್ತಾದ್ರೂ ಅಡ್ಡಿ ಮಾಡಿದಿನಾ ?

    ಡಿಕೆಶಿ : ಅದು ಹಾಗಲ್ಲ ಸರ್.‌ ನೀವ್‌ ಕೊಟ್ಟ ಮಾತು..

    ಸಿದ್ದರಾಮಯ್ಯ : ಏಯ್ ಕೇಳಪ್ಪ ಇಲ್ಲಿ. ಸಂಪುಟದಲ್ಲಿ ನೀನು ಯಾರ್‌ ಹೇಳ್ತೀಯೋ ಅವ್ರೆ ಮಂತ್ರಿ. ಈಗ ನಡೀ.. ಪ್ರೆಸ್‌ ಮುಂದೆ ನಾವಿಬ್ಬರು ಅಣ್ತಮ್ಮ ಅಂತ ಹೇಳಿದ್ಯಲ್ಲ. ಹಂಗೇ ನಡ್ಕೋ.

    ಇಷ್ಟೇ ಇವರಿಬ್ಬರ ನಡುವಿನ Break _ Fast ಮೀಟಿಂಗ್ ಕಥೆ.

    ಉಪಹಾರಕೂಟದ ಕುರಿತು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ಉಪಮುಖ್ಯಮಂತ್ರಿಗಳು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಆದ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಇಂದು ಅವರ ನಿವಾಸಕ್ಕೆ ತೆರಳಿ, ಬೆಳಗಿನ ಉಪಹಾರ ಸೇವಿಸುತ್ತಾ ಮಾತುಕತೆ ನಡೆಸಿದೆ’ ಎಂದು ಹೇಳಿದ್ದಾರೆ.

    ಡಿ.ಕೆ.ಶಿವಕುಮಾರ್, “ಮಾನ್ಯ ಮುಖ್ಯಮಂತ್ರಿಗಳಿಗೆ ನನ್ನ ನಿವಾಸದಲ್ಲಿ ಉಪಹಾರಕೂಟ ಆಯೋಜಿಸಲಾಗಿತ್ತು. ರಾಜ್ಯದ ಅಭಿವೃದ್ಧಿಗೆ ನಮ್ಮ ಬದ್ಧತೆ ಇರಲಿದೆ. ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ರಾಜ್ಯದ ಅಭಿವೃದ್ಧಿ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

    ಉಪಹಾರಕೂಟದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಊರಿನಿಂದ ನಾಟಿಕೋಳಿ ತರಿಸುವಂತೆ ಹೇಳಿದ್ದೆ. ಅವನು ನಾನ್ ವೆಜ್ ತಿನ್ನುವುದಿಲ್ಲ. ನಾನು ತಿನ್ನುತ್ತೇನೆ. ಹೈಕಮಾಂಡ್ ಹೇಳಿದಂತೆ ನಾನು, ಡಿಸಿಎಂ ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.

    “ಹೈಕಮಾಂಡ್ ನಾಯಕರ ಭೇಟಿಗೆ ಸಮಯ ಸಿಕ್ಕಿದರೆ ದೆಹಲಿಗೆ ಹೋಗಿ ಭೇಟಿ ಮಾಡುತ್ತೇವೆ. ಮಂಗಳೂರಿನಲ್ಲಿ ಬುಧವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    “ನಮ್ಮ ಮನೆಗೆ ಉಪಾಹಾರಕ್ಕೆ ಬಂದಿದ್ದಾಗ ಡಿ.ಕೆ.ಶಿವಕುಮಾರ್ ಮಂಗಳವಾರ ಉಪಾಹಾರಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದರು. ಅದರಂತೆ ಬಂದಿದ್ದೇನೆ, ಡಿಸೆಂಬರ್ 8ರಿಂದ ಬೆಳಗಾವಿ ಅಧಿವೇಶನ ಆರಂಭವಾಗುತ್ತಿದೆ. ಅಧಿವೇಶನ ಹಿನ್ನೆಲೆಯಲ್ಲಿ ನಾವು ಚರ್ಚೆ ಮಾಡಿದ್ದೇವೆ. ವಿಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪಿಸಿದರೂ ಎದುರಿಸುತ್ತೇವೆ” ಎಂದರು.

    “ನಾನು, ಡಿಸಿಎಂ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ. ಹೈಕಮಾಂಡ್​ ಹೇಳಿದಂತೆ ಕೇಳಬೇಕೆಂದು ಮೊನ್ನೆಯೂ ಚರ್ಚೆ ಆಗಿತ್ತು, ಇಂದು ಕೂಡ ಚರ್ಚೆ ಮಾಡಿದ್ದೇವೆ. ನಾನು, ಡಿ.ಕೆ.ಶಿವಕುಮಾರ್​ ಸಹೋದರರೇ” ಎಂದು ಸಿದ್ದರಾಮಯ್ಯ ತಿಳಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading