Friday, June 19, 2026
spot_img
More
    spot_img
    HomeLatest newsಶಾಲಾ ಆವರಣದಲ್ಲಿ ಬೀದಿ ನಾಯಿಗಳ ನಿಯಂತ್ರಣ ಹೇಗೆ?, ಸುತ್ತೋಲೆ

    ಶಾಲಾ ಆವರಣದಲ್ಲಿ ಬೀದಿ ನಾಯಿಗಳ ನಿಯಂತ್ರಣ ಹೇಗೆ?, ಸುತ್ತೋಲೆ

    ಬೀದಿ ನಾಯಿಗಳ ಹಾವಳಿಯಿಂದ ಶಾಲಾ ಮಕ್ಕಳು ಅಪಾಯ ಎದುರಿಸುವ ಸಾಧ್ಯತೆ ಹೆಚ್ಚು. ಶಾಲಾ ಮಕ್ಕಳಿಗೆ ನಾಯಿಗಳು ಕಚ್ಚಿ ಗಾಯಗೊಳಿಸುವ ಪ್ರಕರಣಗಳು ಆಗಾಗ ನಡೆಯುತ್ತವೆ. ಶಾಲಾ ಆವರಣದಲ್ಲಿ ಬೀದಿ ನಾಯಿ ಹಾವಳಿ ತಡೆಯಲು ಕರ್ನಾಟಕ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ.

    Advertisement

    ಈ ಕುರಿತು ವಿ. ರಶ್ಮಿ ಮಹೇಶ್, ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ. ಈ ಸುತ್ತೋಲೆ ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

    ಮಾನ್ಯ ಸರ್ವೋಚ್ಚ ನ್ಯಾಯಾಲಯದ ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ:5/2025ರ ದಿನಾಂಕ 07.11.2025 ರ ಆದೇಶ ಮತ್ತು ಮಾನ್ಯ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ ಇವರ ಆದೇಶವನ್ನು ಉಲ್ಲೇಖಿಸಲಾಗಿದೆ.

    ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ: 5/2025ರ ದಿನಾಂಕ: 07.11.2025ರ ತೀರ್ಪಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟಲು ನಿರ್ದೇಶನ ನೀಡಿರುತ್ತದೆ. ಈ ಸಂಬಂಧ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಟೆಗಟ್ಟುವ ನಿಟ್ಟಿನಲ್ಲಿ ಅನುಸರಿಬೇಕಾದ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ.

    ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ.

    * ಎಲ್ಲಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ನಾಯಿಗಳ ಸಂಖ್ಯೆಯನ್ನು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣ ನೀಡುವುದು.

    * ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುತಿಸಿದ ನಾಯಿಗಳನ್ನು ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ನಾಯಿ ಆಶ್ರಯ ತಾಣಗಳಿಗೆ ಸಾಗಿಸಲು ಸಹಕಾರ ನೀಡುವುದು.

    * ಒಮ್ಮೆ ನಾಯಿಗಳನ್ನು ಶಿಕ್ಷಣ ಸಂಸ್ಥೆಯ ಆವರಣದಿಂದ ಸ್ಥಳಾಂತರಿಸಿದ ನಂತರ ಪುನ: ಬೀದಿನಾಯಿಗಳು ಶಾಲಾ ಆವರಣದೊಳಗೆ ಪ್ರವೇಶಿಸದಂತೆ ತಡೆಯಲು ಸಂಸ್ಥೆಯ ಆವರಣಕ್ಕೆ ಕಾಂಪೌಂಡ್/ ಬೇಲಿಯನ್ನು ನಿರ್ಮಿಸುವುದು.

    * ಮೇಲ್ಕಂಡ ಎಲ್ಲಾ ಚಟುವಟಿಕೆಗಳ ಮೇಲುಸ್ತುವಾರಿ ಮಾಡಲು ಹಾಗೂ ಸ್ಥಳಿಯ ಸಂಸ್ಥೆಗಳೊಂದಿಗೆ ಸಮನ್ವಯತೆ ಸಾಧಿಸಲು ಆಯಾ ಶಾಲೆಯ ಮುಖ್ಯಶಿಕ್ಷಕರು/

    ಪ್ರಾಂಶುಪಾಲರು/ ಹಿರಿಯ ಸಹಶಿಕ್ಷಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸುವುದು.

    ಆಯಾ ತಾಲ್ಲೂಕಿನ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಉಪನಿರ್ದೇಶಕರು(ಆಡಳಿತ ಮತ್ತು ಪದವಿ ಪೂರ್ವ) ಇವರು ತಮ್ಮ ವ್ಯಾಪ್ತಿಯ ಶಾಲಾ/ ಕಾಲೇಜುಗಳ ಮುಖ್ಯಸ್ಥರು ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಶಾಲಾ-ಕಾಲೇಜುಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಗಟ್ಟಲು ಸೂಕ್ತ ಕ್ರಮವಹಿಸಿರುವುದನ್ನು ಖಾತ್ರಿಪಡಿಸಿಕೊಳ್ಳುವುದು.

    ತಾಲ್ಲೂಕು ಮತ್ತು ಜಿಲ್ಲಾ ವ್ಯಾಪ್ತಿಯ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಶಾಲಾ-ಕಾಲೇಜುಗಳ ಮುಖ್ಯಸ್ಥರು ಸಲ್ಲಿಸಿರುವ ಮಾಹಿತಿಯಂತೆ ಕ್ರಮವಾಗುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು. ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಶಾಲಾ-ಕಾಲೇಜುಗಳಲ್ಲಿ ಅನುಷ್ಠಾನಗೊಳಿಸುತ್ತಿರುವುದನ್ನು ಪ್ರತಿ 15 ದಿನಗಳಿಗೊಮ್ಮೆ ಶಾಲಾ-ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಸಿ ಅನುಪಾಲನೆ ಮಾಡಲು ಸೂಚಿಸಿದೆ.

    ಆಯುಕ್ತರು, ಅಪರ ಆಯುಕ್ತರು (ಧಾರವಾಡ ಮತ್ತು ಕಲಬುರಗಿ), ಶಾಲಾ ಶಿಕ್ಷಣ ಇಲಾಖೆ, ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ನಿರ್ದೇಶಕರು (ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ) ಇವರು ಪ್ರತಿ 15 ದಿನಗಳಿಗೊಮ್ಮೆ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಲು ಸೂಚಿಸಿದೆ.

    ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿನಾಯಿಗಳ ಉಪಟಳವನ್ನು ತಡೆಗಟ್ಟಲು ಮೇಲೆ ವಿವರಿಸಿದಂತೆ ಮಕ್ಕಳ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಂಡು ಶಾಲಾ/ ಕಾಲೇಜು ಆವರಣದಲ್ಲಿ ಬೀದಿನಾಯಿಗಳಿಂದ ಯಾವುದೇ ಅವಘಡ ಸಂಭವಿಸದಂತೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಅನುಷ್ಠಾನಗೊಳಿಸಲು ಕಟ್ಟುನಿಟ್ಟಾಗಿ ಕ್ರಮವಹಿಸಲು ಸೂಚಿಸಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಕಾಕ್ರೋಚ್ ಜನತಾ ಪಾರ್ಟಿ: ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ ವೈರಲ್ ಟ್ರೆಂಡ್!

    ಕಾಕ್ರೋಚ್ ಜನತಾ ಪಾರ್ಟಿ ಎಂಬ ಪದ ಸಾಮಾಜಿಕ ಜಾಲತಾಣದಲ್ಲಿ ಯಾವಾಗ, ಹೇಗೆ ವೈರಲ್ ಆಯಿತು? ಈ ಟ್ರೆಂಡ್ ಹಿಂದಿನ ಸಂಪೂರ್ಣ ಕಥೆ ಓದಿ.

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading