Saturday, September 19, 2026
spot_img
More
    spot_img
    HomeTop Storyಮನಮೋಹನ್‌ ಸಿಂಗ್‌ ಅವಧಿಗಿಂತ ಮೋದಿ ಅವಧಿಯಲ್ಲೇ ಹೆಚ್ಚು ಉದ್ಯೋಗ ಸೃಷ್ಟಿ: ಕೇಂದ್ರ ಸರ್ಕಾರ ಮಾಹಿತಿ

    ಮನಮೋಹನ್‌ ಸಿಂಗ್‌ ಅವಧಿಗಿಂತ ಮೋದಿ ಅವಧಿಯಲ್ಲೇ ಹೆಚ್ಚು ಉದ್ಯೋಗ ಸೃಷ್ಟಿ: ಕೇಂದ್ರ ಸರ್ಕಾರ ಮಾಹಿತಿ

    ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಆಡಳಿತದ ಅವಧಿಗೆ ಹೋಲಿಸಿದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷಗಳ ಅವಧಿಯಲ್ಲಿ 5 ಪಟ್ಟು ಅಧಿಕ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

    Advertisement

    ಬಿಜೆಪಿ ನೇತೃತ್ವದ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಉದ್ಯೋಗಗಳ ಸೃಷ್ಟಿ ಕಡಿಮೆಯಾಗಿದೆ ಎಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.

    2014-15ರ ಅವಧಿಯಲ್ಲಿ 47.15 ಕೋಟಿ ಇದ್ದ ಉದ್ಯೋಗವಕಾಶವು 2023-24ರಲ್ಲಿ ಶೇ.36 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್‌ ಮಾಂಡವೀಯ ತಿಳಿಸಿದ್ದಾರೆ.

    2004-14ರ ನಡುವಿನ ಕಾಂಗ್ರೆಸ್‌ ನೇತೃತ್ವದ ಆಡಳಿತದ ಅವಧಿಯಲ್ಲಿ ಭಾರತದಲ್ಲಿ ಉದ್ಯೋಗವು ಕೇವಲ 7 ಪ್ರತಿಶತದಷ್ಟು ಬೆಳೆದಿದೆ. ಇವರ ಅವಧಿಯಲ್ಲಿ 2.9 ಕೋಟಿ ಉದ್ಯೋಗ ಹೆಚ್ಚುವರಿಯಾಗಿ ಸೃಷ್ಟಿಯಾಗಿದೆ.

    ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ 2014-24ರ ನಡುವೆ 17.19 ಕೋಟಿ ಉದ್ಯೋಗ ಹೆಚ್ಚುವರಿಯಾಗಿ ಸೇರ್ಪಡೆಗೊಂಡಿವೆ. ಕಳೆದ ವರ್ಷ ದೇಶದಲ್ಲಿ ಸುಮಾರು 4.6 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಮನ್ಸುಖ್‌ ಮಾಂಡವೀಯ ಮಾಹಿತಿ ನೀಡಿದ್ದು, ವಿರೋಧ ಪಕ್ಷಗಳಿಗೆ ಟಾಂಗ್‌ ನೀಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading