Wednesday, July 8, 2026
spot_img
More
    spot_img
    HomeLatest newsಮಹಾಕುಂಭ ಕಾಲ್ತುಳಿತದಲ್ಲಿ ಸತ್ತವರ ಶವಗಳನ್ನು ನದಿಗೆ ಎಸೆಯಲಾಗಿದೆ, ಅದೇ ನೀರನ್ನು ಜನರಿಗೆ ಪೂರೈಸಲಾಗುತ್ತಿದೆ: ಜಯಾ ಬಚ್ಚನ್‌

    ಮಹಾಕುಂಭ ಕಾಲ್ತುಳಿತದಲ್ಲಿ ಸತ್ತವರ ಶವಗಳನ್ನು ನದಿಗೆ ಎಸೆಯಲಾಗಿದೆ, ಅದೇ ನೀರನ್ನು ಜನರಿಗೆ ಪೂರೈಸಲಾಗುತ್ತಿದೆ: ಜಯಾ ಬಚ್ಚನ್‌

    ಪ್ರಸ್ತುತ ಜರುಗುತ್ತಿರುವ ಮಹಾಕುಂಭ ಮೇಳಾದಲ್ಲಿ ಕೆಲ ದಿನಗಳ ಹಿಂದಷ್ಟೇ ಮೌನಿ ಅಮಾವಾಸ್ಯೆಯಂದು ನಡೆದ ಕಾಲ್ತುಳಿತ ದುರಂತದಲ್ಲಿ ಕನಿಷ್ಟ 30 ಮಂದಿ ಸಾನ್ನಪ್ಪಿದ್ದರು ಎಂದು ವರದಿಯಾಗಿತ್ತು.

    Advertisement

    ಇನ್ನು ಈ ಕಾಲ್ತುಳಿತ ಪ್ರಕರಣದಲ್ಲಿ ಉತ್ತರ ಪ್ರದೇಶ ಹಾಗೂ ಕೇಂದ್ರ ಸರ್ಕಾರ ಸರಿಯಾದ ನಡೆಯನ್ನು ಅನುಸರಿಸಿಲ್ಲ ಎಂದು ವಿಭಿನ್ನ ಸನ್ನಿವೇಶಗಳನ್ನುಲ್ಲೇಖಿಸಿ ಟೀಕಿಸಲಾಗುತ್ತಿದೆ. ಹೌದು, ಯೋಗಿ ಸರ್ಕಾರ ಸಾಮಾನ್ಯ ಜನರಿಗೆ ಹಾಗೂ ವಿಐಪಿಗಳಿಗೆ ಪ್ರತ್ಯೇಕ ಸ್ನಾನದ ವ್ಯವಸ್ಥೆ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹಲವರು ಆರೋಪಿಸಿದ್ದು, ಇದೀಗ ಶವಗಳ ಕುರಿತಾಗಿ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

    ಸದನದಲ್ಲಿ ಮಾತನಾಡಿದ ಜಯಾ ಬಚ್ಚನ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ʼಈಗ ದೇಶದಲ್ಲಿ ಅತಿ ಕಲುಷಿತ ನೀರು ಎಲ್ಲಿದೆ ಎಂದು ಕೇಳಿದರೆ, ಮಹಾಕುಂಭದಲ್ಲಿದೆ ಎಂದು ಉತ್ತರ ಬರಲಿದೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಶವಗಳನ್ನು ನದಿಗೆ ಎಸೆಯಲಾಗಿದೆ. ಇದರಿಂದಾಗಿ ನೀರು ಇನ್ನಷ್ಟು ಕಲುಷಿತವಾಗಿದೆ.ʼ ಎಂದು ಕಿಡಿಕಾರಿದ್ದಾರೆ.

    ಇನ್ನೂ ಮುಂದುವರಿದು ಮಾತನಾಡಿದ ಜಯಾ ಬಚ್ಚನ್‌ ʼಮೃತದೇಹಗಳನ್ನು ನದಿಗೆ ಎಸೆಯಲಾದ ಕಾರಣ ನೀರು ಕಲುಷಿತಗೊಂಡಿದೆ. ಅದೇ ನೀರನ್ನು ಜನ ಸಾಮಾನ್ಯರಿಗೆ ಪೂರೈಸಲಾಗುತ್ತಿದೆ. ಆದರೆ ಉತ್ತರ ಪ್ರದೇಶ ಸರ್ಕಾರ ಮಾತ್ರ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲʼ ಎಂದಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading