ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕರ್ನಾಟಕಕ್ಕೆ ಆಗಮಿಸಿದ್ದು, ಸದ್ಯ ಬೆಂಗಳೂರಿನಲ್ಲಿ ಎಲ್ಲ ಶಾಸಕರನ್ನು ನೇರವಾಗಿ ಭೇಟಿ ನೀಡಿ ಚರ್ಚೆ ನಡೆಸುತ್ತಿದ್ದಾರೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾದ ಅಸಮಾಧಾನದ ಕಾರಣಕ್ಕೆ ಸ್ವತಃ ಸುರ್ಜೇವಾಲ ಅವರೇ ರಂಗಪ್ರವೇಶ ಮಾಡಿದ್ದು, ಶಾಸಕರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಈ ಚರ್ಚೆಯಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಭಿನ್ನಮತವೇನು ಹಾಗೂ ಪರಿಹಾರವೇನೆಂಬುದನ್ನು ಮನಗಾಣಲಿದ್ದಾರೆ.
ಹೀಗೆ ಸುರ್ಜೇವಾಲ ನಗರದಲ್ಲಿ ಬೀಡುಬಿಟ್ಟಿರುವ ಸಮಯದಲ್ಲೇ ಕಾಂಗ್ರೆಸ್ ಶಾಸಕರ ಬಾಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಕೇಳಿಬಂದಿದ್ದು, ಇದು ಪಕ್ಷಕ್ಕೆ ಭಾರೀ ಮುಜುಗರವನ್ನು ಉಂಟುಮಾಡಿದೆ.
ಇದೀಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಈ ಕುರಿತು ಮಾತನಾಡಿ ʼಯಾವುದೇ ಬದಲಾವಣೆಯೂ ಬರುವುದಿಲ್ಲ. ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ ಎಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಹೇಳಿದ್ದಾರೆ. ಪಕ್ಷದ ಬಲವರ್ಧನೆ ಮಾಡುತ್ತಿದ್ದೇವೆ. ಅಭಿವೃದ್ಧಿ ಮಾಡುತ್ತೇವೆ. ಇದನ್ನೇ ಮುಂದುವರಿಸಿಕೊಂಡು ಹೋಗುತ್ತೇವೆʼ ಎಂದರು.
ʼಹೈಕಮಾಂಡ್ ಅವರು ಎಲ್ಲ ಶಾಸಕರೂ ಬಾಯಿ ಮುಚ್ಚಿಕೊಂಡು ಇರಬೇಕು. ತುಟಿ ಪಿಟಿಕ್ ಎನ್ನಬಾರದು ಎಂದು ಹೈಕಮಾಂಡ್‌ನವರು ಹೇಳಿದ್ದಾರೆʼ ಎಂದು ಈಶ್ವರ್ ಖಂಡ್ರೆ ತಿಳಿಸಿದರು.
ಮತ್ತೊಂದು ಐಷಾರಾಮಿ ಕಾರು ಖರೀದಿಸಿದ ರಾಕಿಂಗ್ ಸ್ಟಾರ್ ಯಶ್; ಬೆಲೆ ಎಷ್ಟು ಕೋಟಿ ಗೊತ್ತಾ?
ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


