Thursday, March 19, 2026
spot_img
More
    spot_img
    HomeInternationalಪ್ರಧಾನಿ ನರೇಂದ್ರ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    ಪ್ರಧಾನಿ ನರೇಂದ್ರ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    ನವದೆಹಲಿ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ ಆಫೀಸರ್‌ ಆಫ್‌ ದಿ ಆರ್ಡರ್‌ ದಿ ಸ್ಟಾರ್‌ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    ಐದು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಘಾನಾ ದೇಶಕ್ಕೆ ಭೇಟಿ ನೀಡಿದ್ದಾರೆ. 30 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ನೀಡಿದ ಮೊದಲ ಭೇಟಿ ಇದಾಗಿದೆ.

    ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಪ್ರಭಾವಶಾಲಿ ಜಾಗತಿಕ ನಾಯಕ ಎಂದು ಗುರುತಿಸಿ ಘಾನಾದ ಅಧ್ಯಕ್ಷ ಜಾನ್‌ ಡ್ರಾಮಣಿ ಮಹಾಮ ಅವರು ರಾಷ್ಟ್ರೀಯ ಗೌರವ ಆಫೀಸರ್‌ ಆಫ್‌ ದಿ ಆರ್ಡರ್‌ ದಿ ಸ್ಟಾರ್‌ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

    ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಗೌರವ ಕೇವಲ ವೈಯಕ್ತಿಕ ಶ್ರಮದಿಂದಲ್ಲ. ಇದು 140 ಕೋಟಿ ಭಾರತೀಯನ ಸಾಧನೆ. ಅವರ ಪರವಾಗಿ ನಾನು ಇದನ್ನು ಸ್ವೀಕರಿಸಿದ್ದೇನೆ. ಈ ಪ್ರಶಸ್ತಿಯನ್ನು ರಾಷ್ಟ್ರದ ಯುವಜನತೆಗೆ ಅರ್ಪಿಸುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಘಾನಾದ ರಾಷ್ಟ್ರೀಯ ಪ್ರಶಸ್ತಿ ಆಫೀಸ್‌ ಆಫ್‌ ದಿ ಆರ್ಡರ್‌ ಆಫ್‌ ದಿ ಸ್ಟಾರ್‌ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

    ಈ ಪ್ರಶಸ್ತಿಯು ಭಾರತ ಹಾಗೂ ಘಾನಾ ನಡುವಿನ ಸ್ನೇಹವನ್ನು ಗಟ್ಟಿಯಾಗಿರಿಸುತ್ತದೆ ಹಾಗೂ ದ್ವಿಪಕ್ಷೀಯ ಸಂಬಂಧಗಳಿಗೆ ಒತ್ತು ನೀಡುತ್ತದೆ ಎಂದು ತಿಳಿಸಿದ್ದಾರೆ.

    Fact Check: ಪಹಲ್ಗಾಮ್‌ ದಾಳಿಯನ್ನು ಭಾರತದವರೇ ಮಾಡಿದ್ದು, ಮೋದಿ ಎಂಥ ಚೈಲ್ಡ್‌ ಎಂದ ಅಫ್ರಿದಿ!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಗರ್ಭಧಾರಣೆ ಘೋಷಿಸಿದ ತಿಂಗಳಲ್ಲೇ ಯೂಟ್ಯೂಬರ್ ಪತ್ನಿ ಹತ್ಯೆ—ಪತಿಯ ಭೀಕರ ಕೃತ್ಯ!

    ತೆಲಂಗಾಣದಲ್ಲಿ ನಡೆದ ಈ ದಾರುಣ ಘಟನೆ ದೇಶದಾದ್ಯಂತ ಆತಂಕ ಮೂಡಿಸಿದೆ. “ಯೂಟ್ಯೂಬರ್ ಪತ್ನಿ ಹತ್ಯೆ” ಪ್ರಕರಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ತನ್ನ ಗರ್ಭಧಾರಣೆಯನ್ನು ಸ್ವತಃ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ...

    ಐಪಿಎಲ್ 2026: ಇಶಾನ್ ಕಿಶನ್ ಕೈಗೆ SRH ನಾಯಕತ್ವ—ಅಭಿಷೇಕ್ ಶರ್ಮಾಗೆ ಹೊಸ ಜವಾಬ್ದಾರಿ!

    ಐಪಿಎಲ್ 2026 ಕುರಿತು ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ! “ಐಪಿಎಲ್ 2026 ಇಶಾನ್ ಕಿಶನ್ SRH ನಾಯಕ” ಎಂಬ ಸುದ್ದಿ ಈಗ ಕ್ರಿಕೆಟ್ ವಲಯದಲ್ಲಿ ಸದ್ದು ಮಾಡುತ್ತಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಮಹತ್ವದ ಬದಲಾವಣೆಗಳಾಗಿದ್ದು,...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading