ದಿಂಡಿಗಲ್: ಎನ್‌ಪಿಆರ್ ಕಾಲೇಜ್ ಗ್ರೌಂಡ್‌ನಲ್ಲಿ ನಿನ್ನೆ ( ಜುಲೈ 2 ) ನಡೆದ ತಮಿಳುನಾಡು ಪ್ರೀಮಿಯರ್ ಲೀಗ್ ಟೂರ್ನಿಯ ಎಲಿಮಿನೇಟರ್ ಪಂದ್ಯ ನಡೆಯಿತು. ತ್ರಿಚಿ ಗ್ರಾಂಡ್ ಚೋಳಾಸ್ ಹಾಗೂ ದಿಂಡಿಗಲ್ ಡ್ರಾಗನ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಪಂದ್ಯದಲ್ಲಿ ಟಾಸ್ ಗೆದ್ದ ದಿಂಡಿಗಲ್ ಡ್ರಾಗನ್ಸ್ ಫೀಲ್ಡಿಂಗ್ ಆರಿಸಿಕೊಂಡು ತ್ರಿಚಿ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ತ್ರಿಚಿ ಗ್ರಾಂಡ್ ಚೋಳಾಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 140 ರನ್ ಕಲೆಹಾಕಿ ದಿಂಡಿಗಲ್ ಡ್ರಾಗನ್ಸ್ ತಂಡಕ್ಕೆ ಗೆಲ್ಲಲು 141 ರನ್‌ಗಳ ಗುರಿಯನ್ನು ನೀಡಿತು.
ಈ ಗುರಿಯನ್ನು ಬೆನ್ನಟ್ಟಿದ ದಿಂಡಿಗಲ್ ಡ್ರಾಗನ್ಸ್ ಪರ ಆರಂಭಿಕ ಆಟಗಾರನಾಗಿ ಸ್ವತಃ ನಾಯಕ ರವಿಚಂದ್ರನ್ ಅಶ್ವಿನ್ ಆರಂಭಿಕನಾಗಿ ಕಣಕ್ಕಿಳಿದರು. ಹೀಗೆ ಅತ್ಯಮೂಲ್ಯ ಎಲಿಮಿನೇಟರ್ ಪಂದ್ಯದಲ್ಲಿ ಓಪನರ್ ಅಗಿ ಕಣಕ್ಕಿಳಿದ ಅಶ್ವಿನ್ 48 ಎಸೆತಗಳಲ್ಲಿ 11 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 83 ರನ್ ಬಾರಿಸಿ ಅಬ್ಬರಿಸಿದರು. ಅಶ್ವಿನ್ ಅಬ್ಬರದ ನೆರವಿನಿಂದ ದಿಂಡಿಗಲ್ 16.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 143 ರನ್ ಬಾರಿಸಿ 6 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಂಡು ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ.
ಇನ್ನು ಅಶ್ವಿನ್ ಬ್ಯಾಟಿಂಗ್ ಮಾತ್ರವಲ್ಲದೇ ಬೌಲಿಂಗ್‌ನಲ್ಲೂ ಮಿಂಚಿದರು. 3 ವಿಕೆಟ್ ಪಡೆದು ತಂಡದ ಪರ ಅತಿಹೆಚ್ಚು ವಿಕೆಟ್ ಪಡೆದ ಆಟಗಾರ ಎನಿಸಿಕೊಂಡರು.
ಎಐ ಕೃಷಿ ಕನ್ನಡ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


