ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ತನ್ನ ಕ್ಲರ್ಕ್ 2025 (CRP ಕ್ಲರ್ಕ್ಸ್ XIV) ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯು ದೇಶಾದ್ಯಂತ ಇರುವ 11 ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಟ್ಟು 10,277 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವ ಗುರಿ ಹೊಂದಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಪ್ರಮುಖ ಮಾಹಿತಿ:
ಒಟ್ಟು ಹುದ್ದೆಗಳು: 10,277
ಹುದ್ದೆಯ ಹೆಸರು: ಕಸ್ಟಮರ್ ಸರ್ವೀಸ್ ಅಸೋಸಿಯೇಟ್ (ಕ್ಲರ್ಕ್)
ನೇಮಕಾತಿ ಪ್ರಕ್ರಿಯೆ: ಸಾಮಾನ್ಯ ನೇಮಕಾತಿ ಪ್ರಕ್ರಿಯೆ (CRP ಕ್ಲರ್ಕ್ಸ್ XIV)
ಅರ್ಜಿ ಸಲ್ಲಿಸಲು ಅರ್ಹತೆ: ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: ದೇಶಾದ್ಯಂತ ಒಟ್ಟು 10,277 ಹುದ್ದೆಗಳ ನೇಮಕಾತಿ ನಡೆಯಲಿದೆ. ಕರ್ನಾಟಕಕ್ಕೆ 1,170 ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಕರ್ನಾಟಕದ ವಿವಿಧ ಬ್ಯಾಂಕ್‌ಗಳಲ್ಲಿರುವ ಹುದ್ದೆಗಳ ವಿವರ ಹೀಗಿದೆ.
ಬ್ಯಾಂಕ್ ಆಫ್ ಬರೋಡಾ- 253
ಬ್ಯಾಂಕ್ ಆಫ್ ಇಂಡಿಯಾ- 45
ಬ್ಯಾಂಕ್ ಆಫ್ ಮಹಾರಾಷ್ಟ್ರ- 20
ಕೆನರಾ ಬ್ಯಾಂಕ್- 675
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ- 47
ಇಂಡಿಯನ್ ಓವರ್ಸೀಸ್ ಬ್ಯಾಂಕ್- 44
ಪಂಜಾಬ್ ನ್ಯಾಷನಲ್ ಬ್ಯಾಂಕ್- 6
ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್- 30
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ- 50
ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.
ವಯೋಮಿತಿ: ಕನಿಷ್ಠ 20, ಗರಿಷ್ಠ ವಯೋಮಿತಿ 28 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 5 ವರ್ಷ, ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶೇಷಚೇತನ ಅಭ್ಯರ್ಥಿಗಳಿಗೆ 175 ರೂ ಅರ್ಜಿ ಶುಲ್ಕವಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ 850 ರೂ ಅರ್ಜಿ ಶುಲ್ಕವಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ. ಇದರಲ್ಲಿ ಆಯ್ಕೆಯಾದವರನ್ನು ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಆಗಸ್ಟ್ 1ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಆಗಸ್ಟ್ 21 ಕೊನೆಯ ದಿನ. ಈ ಕುರಿತು ಹೆಚ್ಚಿನ ಮಾಹಿತಿ ಹಾಗೂ ಪರೀಕ್ಷೆಯ ತಾತ್ಕಾಲಿಕ ದಿನಾಂಕಗಳ ಮಾಹಿತಿಗೆ ಅಧಿಕೃತ ಅರ್ಜಿಯನ್ನು ibps.in ಜಾಲತಾಣದಲ್ಲಿ ಪಡೆಯಬಹುದು.
ಐಬಿಪಿಎಸ್ ಕ್ಲರ್ಕ್ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ ಆಗಸ್ಟ್ 1, 2025
IBPS ಕ್ಲರ್ಕ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಆಗಸ್ಟ್ 21, 2025
ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಲು ಕೊನೆಯ ದಿನಾಂಕ ಆಗಸ್ಟ್ 21, 2025
SRF ನೇಮಕಾತಿ 2025: ಧಾರವಾಡ ಕೃಷಿ ವಿಜ್ಞಾನ ವಿವಿಯಲ್ಲಿ ಆಗಸ್ಟ್ 12ರಂದು ನೇರ ಸಂದರ್ಶನ
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


