ಚಿತ್ರದುರ್ಗ: ಕೋರ್ಟ್ ತೀರ್ಪಿಗೆ ಯಾರೇ ಆದರೂ ತಲೆ ಬಾಗಲೇಬೇಕಾಗುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಸಂಬಂಧ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್‌ನಲ್ಲಿ ಆದೇಶ ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ ಎಂದರು.
ಪ್ರಜ್ವಲ್ ಮೇಲೆ ಆರೋಪ ಬಂದ ತಕ್ಷಣ ಪಕ್ಷದಿಂದ ಅಮಾನತು ಮಾಡಲಾಗಿತ್ತು. ನಮ್ಮ ಪಕ್ಷದ ವರಿಷ್ಠರು ಪಕ್ಷದಿಂದ ಅಮಾನತಿನಲ್ಲಿಟ್ಟಿದ್ದರು. ಆಗ ಅಪರಾಧಿಯೋ ಅಲ್ಲವೀ ಎಂಬ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಸ್ಪಷ್ಟತೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕಿಂತ ಹೆಚ್ಚಾಗಿ ಈ ವಿಷಯದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ: ಕಾಲುವೆಗೆ ಬಿದ್ದ ವಾಹನ; 11 ಜನರು ಸಾವು
ಎಐ ಕೃಷಿ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


