ಹುಬ್ಬಳ್ಳಿ: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಇದರಿಂದ ಬಿಜೆಪಿಗೆ ಮುಜುಗರವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆಯಿಂದ ಬಿಜೆಪಿಗೆ ಮುಜುಗರವಿಲ್ಲ. ಪೊಲೀಸರು ತನಿಖೆ ಮಾಡಿದ್ದಾರೆ. ಕೋರ್ಟ್ ತೀರ್ಪು ನೀಡಿದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಿದೆ ಅಷ್ಟೇ. ಜೆಡಿಎಸ್‌ನವರದ್ದು ಪ್ರತ್ಯೇಕ ಪಕ್ಷ. ಆ ಪಕ್ಷದ ಜೊತೆ ನಮ್ಮ ಮೈತ್ರಿಯಿದೆ. ಪ್ರಜ್ವಲ್ ಎಷ್ಟು ಜನ ಅಪರಾಧಿಗಳ ಜೊತೆ ಇದ್ದರು ಎಂಬುದು ಗೊತ್ತು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಬಗ್ಗೆ ಹೇಳುವ ಕಾಂಗ್ರೆಸ್‌ನ ರಾಹುಲ್ ಗಾಂಧಿ ಎಂತೆಂತಹ ಅಪರಾಧಿಗಳ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಖಲಿಸ್ತಾನಿ ಉಗ್ರರ ಜೊತೆ ಇರುವ ಫೋಟೋ ಇದೆ. ಈ ಬಗ್ಗೆ ಅವರು ಏನು ಹೇಳ್ತಾರೆ. ನಮ್ಮ ಬಗ್ಗೆ ಮಾತನಾಡಲು ಕಾಂಗ್ರೆಸ್‌ನವರಿಗೆ ನೈತಿಕತೆಯಿಲ್ಲ ಎಂದು ವಾಗ್ದಾಳಿ ನಡೆಸಿದರು.
ಉತ್ತರ ಪ್ರದೇಶ: ಕಾಲುವೆಗೆ ಬಿದ್ದ ವಾಹನ; 11 ಜನರು ಸಾವು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


