ಗೊಂಡಾ: ಉತ್ತರ ಪ್ರದೇಶದ ಗೊಂಡಾದ ಇಟಿಯಾ ಥೋಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಕಾಲುವೆಗೆ ಉರುಳಿ ಬಿದ್ದ ಪರಿನಾಮ 11 ಮಂದಿ ಸಾವನ್ನಪ್ಪಿದ್ದಾರೆ.
ಪ್ರಯಾಣಿಕರಲ್ಲಿ ಪೃಥ್ವಿನಾಥ ದೇವಸ್ಥಾನಕ್ಕೆ ಹೋಗುತ್ತಿದ್ದ ಭಕ್ತರೂ ಸೇರಿದ್ದಾರೆ. ಘಟನೆಯಲ್ಲಿ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ. ಇತರರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೊಲೆರೋ ವಾಹನವು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದ್ದು, ಸಾವುನೋವುಗಳಿಗೆ ಕಾರಣವಾಗಿದೆ.
ವಾಹನದಲ್ಲಿ ಚಾಲಕ ಸೇರಿದಂತೆ ಒಟ್ಟು 15 ಜನರು ಪ್ರಯಾಣಿಸುತ್ತಿದ್ದರು. ಗ್ರಾಮಸ್ಥರು ಹಾಗೂ ರಕ್ಷಣಾ ತಂಡಗಳ ಸಹಾಯದಿಂದ ಮುಳುಗಿದ ವಾಹನದಿಂದ 11 ಶವಗಳನ್ನು ಹೊರತೆಗೆಯಲಾಗಿದೆ. ಇತರ ನಾಲ್ವರು ಪ್ರಯಾಣಿಕರನ್ನು ಗಂಭೀರ ಸ್ಥಿತಿಯಲ್ಲಿ ರಕ್ಷಿಸಲಾಗಿದ್ದು, ಅವರನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಸಿಎಂ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅಪಘಾತದ ಬಗ್ಗೆ ತಿಳಿದ ತಕ್ಷಣ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ತ್ವರಿತಗೊಳಿಸಲು ಸ್ಥಳಕ್ಕೆ ಧಾವಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬದವರಿಗೆ 5 ಲಕ್ಷ ರೂಗಳ ಆರ್ಥಿಕ ನೆರವು ಘೋಷಣೆ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ; ಸಿಟಿ ರವಿ, ಅಶೋಕ್ ಮಾತನಾಡಿ ಎಂದು ಕುಟುಕಿದ ಡಿಕೆಶಿ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


