ವಿಜಯಪುರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳು ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ರೌಡಿಶೀಟರ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ
ರೌಡಿಶೀಟರ್ ಭೀಮನಗೌಡ ಬೀರಾದಾರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಹೇರ್ ಕಟಿಂಗ್ ಮಾಡಿಸಿಕೊಳ್ಳುವಾಗ ಕಣ್ಣಿಗೆ ಖಾರದ ಪುಡಿ ಎರಚಿ ಭೀಮನಗೌಡಗೆ 3 ಸುತ್ತು ಗುಂಡು ಹಾರಿಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ರೌಡಿಶೀಟರ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


