ಮೈಸೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯ, ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ಗೌಡ ನೇತೃತ್ವದಲ್ಲಿ ಯಾತ್ರೆ ಕೈಗೊಳ್ಳಲಾಗಿದ್ದು, ಇಂದು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಯಾತ್ರೆ ಆರಂಭವಾಗಿದೆ.
ಯಾತ್ರೆಗೆ ಶಾಸಕ ತನ್ವೀರ್ ಸೇಠ್ ಚಾಲನೆ ನೀಡಿದ್ದು, 30ಕ್ಕೂ ಹೆಚ್ಚು ಬಸ್‌ಗಳು ಹಾಗೂ ಕಾರುಗಳಲ್ಲಿ 2000 ಸಾವಿರಕ್ಕೂ ಹೆಚ್ಚು ಜನರು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿದ್ದಾರೆ.
ಪ್ರತಿ ವಾರ್ಡ್‌ನಿಂದ ಬಸ್ ವ್ಯವಸ್ಥೆ ಮಾಡಿರುವ ಶಾಸಕ ಹರೀಶ್ ಗೌಡ ಅವರು, ಇಂದು ಧರ್ಮಸ್ಥಳಕ್ಕೆ ತೆರಳುವ ಜನರು ಅಲ್ಲೇ ತಂಗಲಿದ್ದಾರೆ.
ನಾಳೆ ಬೆಳಿಗ್ಗೆ ಮಂಜುನಾಥ ಹಾಗೂ ಅಣ್ಣಪ್ಪಸ್ವಾಮಿ ದರ್ಶನ ಪಡೆದು ಯಾತ್ರಿಗಳು ವಾಪಸ್ಸಾಗಲಿದ್ದು, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರುಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಬಿಜೆಪಿ – ಜೆಡಿಎಸ್ ಧರ್ಮಸ್ಥಳ ಚಲೋ ನಡೆಸಿದ್ದವು
ಇನ್ನು ಕಾಂಗ್ರೆಸ್‌ಗೂ ಮುನ್ನ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಸ್ಥಳ ಚಲೋ ಹೆಸರಿನಡಿಯಲ್ಲಿ ಧರ್ಮಸ್ಥಳ ವಿರುದ್ಧದ ಅಪಪ್ರಚಾರವನ್ನು ಕೈಗೊಂಡಿದ್ದವು. ಈ ವೇಳೆ ಬಿಜೆಪಿ ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಎಸ್‌ಐಟಿ ತನಿಖೆಯನ್ನು ವಿರೋಧಿಸಿ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದ್ದವು.
ಬೆಂಗಳೂರು ಈಗ 5 ಪಾಲಿಕೆಗಳಾಗಿ ವಿಭಜನೆ: ನಿಮ್ಮ ಮನೆ ಯಾವ ಪಾಲಿಕೆ ವ್ಯಾಪ್ತಿಗೆ?
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


