ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯಾರಂಭಗೊಂಡಿದೆ. ಪಾರಂಪರಿಕ ಕಲ್ಲಿನ ಕಟ್ಟಡದ ಮುಂದೆ ಹಾಕಿದ್ದ ಪಾಲಿಕೆಯ ಹಳೆಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಫಲಕವನ್ನು ತೆಗೆದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಫಲಕವನ್ನು ನಿನ್ನೆ ರಾತ್ರಿ ಸಿಬ್ಬಂದಿ ಅಳವಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ನಗರಪಾಲಿಕೆಗಳು ಕಾರ್ಯನಿರ್ವಹಿಸಲಿದ್ದು, ಈ ಐದು ನಗರಪಾಲಿಕೆಗಳಿಗೆ ಆಯುಕ್ತರನ್ನು ಸಹ ನೇಮಕ ಮಾಡಲಾಗಿದೆ. ಎಲ್ಲಾ ಮೇಯರ್ ಗಳಿಗೂ ಎರಡೂವರೆ ವರ್ಷ ಅವಧಿ ಇರುತ್ತದೆ.
ಐದು ಸಂಸ್ಥೆಗೂ ಆಡಳಿತಾಧಿಕಾರಿ, ಆಯುಕ್ತರನ್ನ ಹಾಗೂ ಐಎಎಸ್, ಕೆಎಎಸ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಮಹಾನಗರ ಪಾಲಿಕೆ ಅಂತ ವಿಂಗಡಣೆ ಮಾಡಲಾಗಿದೆ. ವಿಧಾನಸಭೆಯ ಸದಸ್ಯರ ಚುನಾವಣೆ ಕ್ಷೇತ್ರ ವ್ಯಾಪ್ತಿಯೊಳಗೆ ವಾರ್ಡ್‌ಗಳನ್ನು ವಿಂಗಡಿಸಬೇಕು, ಇತರೆ ಕ್ಷೇತ್ರಕ್ಕೆ ವ್ಯಾಪಿಸುವಂತಿಲ್ಲ. ಪ್ರತಿಯೊಂದು ನಗರ ಪಾಲಿಕೆಯ ವಾರ್ಡ್‌ಗಳ ಸಂಖ್ಯೆ 150ಕ್ಕಿಂತ ಹೆಚ್ಚಾಗುವಂತಿಲ್ಲ ಎಂದು ಮಾರ್ಗಸೂಚಿ ಹೊರಡಿಸಲಾಗಿದೆ.
1-11-2025 ವಾರ್ಡ್ ಪುನರ್ ವಿಂಗಡಣೆ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. 30-11-2025ರಂದು ವಾರ್ಡ್ ಗಳ ಮೀಸಲಾತಿ ಅಧಿಸೂಚನೆ ಹೊರಡಿಸಲಾಗುವುದು. ಇದಾದ ಬಳಿಕ ಚುನಾವಣೆ ನಡೆಸಲಿದೆ. ಈಗಾಗಲೇ ಚುನಾವಣೆ ನಡೆಸಲು ಪೂರ್ವಸಿದ್ಧತೆಗೆ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ಅವರೂ ಕೂಡ ಅತಿ ಶೀಘ್ರದಲ್ಲಿ ಮತದಾರರ ಪಟ್ಟಿ ಸಿದ್ಧಪಡಿಸಲಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉತ್ತರ ನಗರ ಪಾಲಿಕೆ ಆಯುಕ್ತೆಯಾಗಿ ಪೊಮ್ಮಳ ಸುನೀಲ್ ಕುಮಾರ್, ದಕ್ಷಿಣ ನಗರ ಪಾಲಿಕೆ ಆಯುಕ್ತರಾಗಿ ರಮೇಶ್.ಕೆ ಎನ್, ದಕ್ಷಿಣ ಪಾಲಿಕೆ ಅಪರ ಆಯುಕ್ತರಾಗಿ ಪಾಂಡುರಾಹುಲ್ ತುಕಾರಾಮ್, ಪಶ್ಚಿಮ ನಗರ ಪಾಲಿಕೆ ಆಯುಕ್ತರಾಗಿ ರಾಜೇಂದ್ರ ಕೆ.ವಿ ನೇಮಕ ಮಾಡಲಾಗಿದೆ. ಕೇಂದ್ರ ನಗರ ಪಾಲಿಕೆ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಮಾಡಲಾಗಿದೆ. ಪೂರ್ವ ನಗರ ಪಾಲಿಕೆ ಆಯುಕ್ತರಾಗಿ ರಮೇಶ್ ಜಿ ಎಸ್, ಪೂರ್ವ ಅಪರ ಆಯುಕ್ತೆಯಾಗಿ ಸ್ನೇಹಲ್ ಸುಧಾಕರ್ ನೇಮಿಸಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


