ಏಷ್ಯಾ ಕಪ್ ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಈ ಬಾರಿ ಏಷ್ಯಾ ಕಪ್ಗೆ ಭಾರತ ತಂಡದ ಆಟಗಾರರು: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.
ಈ ಹಿಂದೆ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕೆಲ ಆಟಗಾರರಿಗೆ ಈ ಬಾರಿಯ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಹದಿನೈದು ಸದಸ್ಯರುಗಳ ಈ ತಂಡದಲ್ಲಿ ಅನೇಕ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ.
ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್ 2024 ರಲ್ಲಿ ಫೈನಲ್ ಪಂದ್ಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರು.ಹೀಗಾಗಿ ಮುಂಬರುವ ಏಷ್ಯಾಕಪ್ ಟೂರ್ನಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ.
ಮೊಹಮ್ಮದ್ ಶಮಿ: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಉತ್ತಮ ಆಟಗಾರರಾದ ಮೊಹಮ್ಮದ್ ಶಮಿಗೆ ಏಷ್ಯಾಕಪ್ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.
ಕೆಎಲ್ ರಾಹುಲ್:ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತದ ಗೆಲುವಿಗೆ ಕಾರಣರಾದ ಕೆಎಲ್ ರಾಹುಲ್ ಅವರಿಗೂ ಏಷ್ಯಾಕಪ್ ತಂಡದಲ್ಲಿ ಸ್ಥಾನ ದೊರೆತಿಲ್ಲ.
ರೋಹಿತ್ ಶರ್ಮಾ: 2024ರ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ವಿದಾಯ ಹೇಳಿದ್ದರು ಹಾಗಾಗಿ ಈ ಬಾರಿಯ ಏಷ್ಯಾಕಪ್ ತಂಡದ ಆಯ್ಕೆಗೆ ರೋಹಿತ್ ಶರ್ಮಾ ಅವರನ್ನು ಪರಿಗಣಿಸಲಾಗಿಲ್ಲ.
ರವೀಂದ್ರ ಜಡೇಜಾ: ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ್ದರು ರವೀಂದ್ರ ಜಡೇಜಾ ಹೀಗಾಗಿ ಅವರನ್ನೂ ಸಹ ಏಷ್ಯಾಕಪ್ ತಂಡಕ್ಕೆ ಆಯ್ಕೆಗೆ ಪರಿಗಣಿಸಲಾಗಿಲ್ಲ.
ಯುಜ್ವೇಂದ್ರ ಚಹಲ್: 2024ರ ಟಿ20 ವಿಶ್ವಕಪ್ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ನರ್ ಆಗಿ ಸ್ಥಾನ ಪಡೆದಿದ್ದರು.ಇದೀಗ ಏಷ್ಯಾಕಪ್ ತಂಡದಲ್ಲೂ ಸ್ಥಾನ ಪಡೆದಿಲ್ಲ.
ರಿಷಭ್ ಪಂತ್: ಟಿ20 ವಿಶ್ವಕಪ್ 2024 ರಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಇದ್ದರು. ಈ ಬಾರಿ ಏಷ್ಯಾಕಪ್ನಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಿತ್ತು. ಆದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಾಯಗೊಂಡಿರುವ ಕಾರಣ ಅವರನ್ನು ಏಷ್ಯಾಕಪ್ ತಂಡದಿಂದ ಹೊರಗಿಡಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


