Saturday, August 8, 2026
spot_img
More
    spot_img
    Homeimp newsಆರ್.ವಿ. ದೇಶಪಾಂಡೆ ಉಡಾಫೆ ಹೇಳಿಕೆ ವಿವಾದ: 'ನಿನ್ನ ಹೆರಿಗೆ ಬೇರೆಡೆ ಮಾಡಿಸುತ್ತೇವೆ' ಎಂದ ಶಾಸಕ

    ಆರ್.ವಿ. ದೇಶಪಾಂಡೆ ಉಡಾಫೆ ಹೇಳಿಕೆ ವಿವಾದ: ‘ನಿನ್ನ ಹೆರಿಗೆ ಬೇರೆಡೆ ಮಾಡಿಸುತ್ತೇವೆ’ ಎಂದ ಶಾಸಕ

    ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರು ಮಹಿಳಾ ಪತ್ರಕರ್ತೆಯೋರ್ವರ ಪ್ರಶ್ನೆಗೆ ನೀಡಿದ ಉಡಾಫೆಯ ಉತ್ತರದಿಂದ ಭಾರೀ ವಿವಾದಕ್ಕೆ ಸಿಲುಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನಲ್ಲಿ ಉತ್ತಮ ಸರ್ಕಾರಿ ಆಸ್ಪತ್ರೆಯ ಕೊರತೆಯ ಬಗ್ಗೆ ಪತ್ರಕರ್ತೆ ರಾಧಾ ಹಿರೇಗೌಡರ್ ಅವರು ಪ್ರಶ್ನಿಸಿದಾಗ, ದೇಶಪಾಂಡೆ ಅವರು ನೀಡಿದ ಅಸಂಬದ್ಧ ಮತ್ತು ಅಸಭ್ಯ ಉತ್ತರ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

    Advertisement

    ಜೋಯಿಡಾ ತಾಲ್ಲೂಕು ದಶಕಗಳಿಂದ ಉತ್ತಮ ಆಸ್ಪತ್ರೆ ಇಲ್ಲದೆ ಪರದಾಡುತ್ತಿದ್ದು, ವಿಶೇಷವಾಗಿ ಗರ್ಭಿಣಿಯರು ವೈದ್ಯಕೀಯ ಸೌಲಭ್ಯಗಳಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಈ ಗಂಭೀರ ಸಮಸ್ಯೆಯನ್ನು ಎತ್ತಿ ಹಿಡಿದ ಪತ್ರಕರ್ತೆ, “ಈ ಭಾಗಕ್ಕೆ ಆಧುನಿಕ ದರ್ಜೆಯ ಸರ್ಕಾರಿ ಆಸ್ಪತ್ರೆ ಯಾವಾಗ ದೊರೆಯುತ್ತದೆ?” ಎಂದು ಕೇಳಿದಾಗ, ದೇಶಪಾಂಡೆ ಅವರು “ಚಿಂತಿಸಬೇಡಿ, ನಿಮ್ಮ ಹೆರಿಗೆಯನ್ನು ನಾವು ಬೇರೆಡೆ ಮಾಡಿಸುತ್ತೇವೆ” ಎಂದು ಹೇಳಿ ಕಣ್ಣು ಮಿಟುಕಿಸಿದ್ದಾರೆ.

    ದೇಶಪಾಂಡೆ ಅವರ ಈ ಹೇಳಿಕೆಯಿಂದ ಆಘಾತಕ್ಕೊಳಗಾದ ಪತ್ರಕರ್ತೆ, ಏನ್ ಸರ್ ಎಂದು ಮರುಪ್ರಶ್ನಿಸಿದ್ದಾರೆ. ಘಟನೆಯ ನಂತರ ಪತ್ರಕರ್ತೆ, ಇಂತಹ ಅಸಂಬದ್ಧ ಹೇಳಿಕೆಯನ್ನು ನಾನು ಅವರ ಬಾಯಿಂದ ಎಂದಿಗೂ ಕೇಳಿರಲಿಲ್ಲ ಎಂದು ಹೇಳಿದ್ದಾರೆ ಮತ್ತು ದೇಶಪಾಂಡೆ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

    ಈ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ದೇಶಪಾಂಡೆಯವರ ವರ್ತನೆಯನ್ನು ತೀವ್ರವಾಗಿ ಖಂಡಿಸಿವೆ. ಮಹಿಳೆಯರಿಗೆ ಕಾಂಗ್ರೆಸ್ ನೀಡುವ ಗೌರವ ಇದೇನಾ?” ಎಂದು ಬಿಜೆಪಿ ಮುಖಂಡರು ಪ್ರಶ್ನಿಸಿದ್ದಾರೆ. ಹಾಗೆಯೇ, ಬಿಜೆಪಿ ಅಥವಾ ಜೆಡಿಎಸ್ ಶಾಸಕರು ಹೀಗೆ ಹೇಳಿದ್ದರೆ ಕಾಂಗ್ರೆಸ್ ನಾಯಕರು ಸುಮ್ಮನಿರುತ್ತಿದ್ದರೇ? ಎಂದು ಜೆಡಿಎಸ್ ನಾಯಕರು ಕಿಡಿಕಾರಿದ್ದಾರೆ. ಈ ವಿವಾದ ರಾಷ್ಟ್ರೀಯ ಮಾಧ್ಯಮಗಳಲ್ಲೂ ವರದಿಯಾಗಿದ್ದು, ದೇಶಪಾಂಡೆಯವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ.

    ಎಸ್‌ಎಸ್‌ಎಲ್‌ಸಿ, ಪಿಯುಸಿ ಮಾಡಿರುವವರಿಗೆ ರೈಲ್ವೆಯಲ್ಲಿವೆ 3518 ಹುದ್ದೆಗಳು

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading