Tuesday, November 3, 2026
spot_img
More
    spot_img
    HomeStateDistrictಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಎಸ್‌ಐಟಿಯಿಂದ ಗ್ರಾಮ ಪಂಚಾಯತಿ ಪಿಡಿಒ ಹಾಗೂ ಸಿಬ್ಬಂದಿಗಳ ವಿಚಾರಣೆ

    ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಎಸ್‌ಐಟಿಯಿಂದ ಗ್ರಾಮ ಪಂಚಾಯತಿ ಪಿಡಿಒ ಹಾಗೂ ಸಿಬ್ಬಂದಿಗಳ ವಿಚಾರಣೆ

    ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳು ನಡೆದಿವೆ ಎಂಬ ಆರೋಪದ ಮೇಲೆ ರಚನೆಯಾದ ವಿಶೇಷ ತನಿಖಾ ತಂಡ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಬಂಧಿಸಿದ ಬಳಿಕ ವಿಠಲ ಗೌಡ ನೀಡಿದ ಮಾಹಿತಿಯ ಆಧಾರದ ಮೇಲೆ ಬಂಗ್ಲೆ ಗುಡ್ಡದಲ್ಲಿ ಸ್ಥಳ ಮಹಜರು ನಡೆಸಿ 7 ಅಸ್ತಿಪಂಜರದ ಅವಶೇಷಗಳನ್ನು ಶೇಖರಿಸಿತ್ತು.

    ಈ ಮಹತ್ವದ ಬೆಳವಣಿಗೆ ಬಳಿಕ ಸೈಲೆಂಟ್‌ ಆಗಿದ್ದ ಎಸ್‌ಐಟಿ ಇದೀಗ ಧರ್ಮಸ್ಥಳ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಸಿಬ್ಬಂದಿಗಳನ್ನು ವಿಚಾರಣೆಗೆ ಕರೆಸುವ ಮೂಲಕ ಮತ್ತೊಂದು ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ.

    ಬುರುಡೆ ಗ್ಯಾಂಗ್‌ ಎಂದೇ ಕರೆಸಿಕೊಂಡು ಪ್ರಕರಣಕ್ಕೆ ಟ್ವಿಸ್ಟ್‌ ಕೊಟ್ಟ ವಿಠಲ ಗೌಡ ಹಾಗೂ ಗಿರೀಶ್‌ ಮಟ್ಟಣ್ಣವರ್‌ ಎಸ್‌ಐಟಿ ಅಧಿಕಾರಿಗಳಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಕ್ರಮ ಹೆಣ ಹೂಳಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪದ ಕಾರಣ ಎಸ್‌ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯಿತಿಯಲ್ಲಿ 1996ರಿಂದ 2014ರವರೆಗೆ ಕೆಲಸ ನಿರ್ವಹಿಸಿದ ಪಿಡಿಒ ಹಾಗೂ ಸಿಬ್ಬಂದಿಗಳನ್ನು ವಿಚಾರಣೆಗೆ ಕರೆಸಿದ್ದಾರೆ.

    ಈ ವಿಚಾರಣೆಯಲ್ಲಿ 1996ರಿಂದ 2014ರವರೆಗೆ ಧರ್ಮಸ್ಥಳದಲ್ಲಿ ಎಷ್ಟು ಶವಗಳನ್ನು ಹೂತುಹಾಕಲಾಗಿದೆ? ಅವುಗಳಲ್ಲಿ ನಿಯಮಗಳನ್ನು ಪಾಲಿಸಿ ಹೆಣಗಳೆಷ್ಟು? ಕೆಲ ಶವಗಳನ್ನು ಗುರುತು ಪತ್ತೆಹಚ್ಚಲು ಸಮಯ ನೀಡದೇ ಹೂತು ಹಾಕಲಾಗಿದೆಯೇ? ಎಂಬ ಪ್ರಶ್ನೆಗಳನ್ನು ಪಿಡಿಒ ಹಾಗೂ ಸಿಬ್ಬಂದಿಗಳಿಗೆ ಕೇಳಲಾಗಲಿದೆ.

    ಚಿತ್ರ ಚೆನ್ನಾಗಿಲ್ಲದಿದ್ರೂ ದುಡ್ಡು ಕೊಟ್ಟು ಒಳ್ಳೆ ರಿವ್ಯೂ ಬರೆಸಿಕೊಳ್ತಿದೆ ಕಾಂತಾರ; ಕೇಳಿಬಂತು ದೊಡ್ಡ ಆರೋಪ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search