ಹೈದರಾಬಾದ್: ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 20 ಜನ ಸಾವನ್ನಪ್ಪಿದ್ದಾರೆ.
ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ 20 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಸ್ ಮೇಲೆ ಜಲ್ಲಿಕಲ್ಲು ತುಂಬಿದ್ದ ಟಿಪ್ಪರ್ ಮಗುಚಿಬಿದ್ದು ಅಪಘಾತ ಸಂಭವಿಸಿದೆ.
ತೆಲಂಗಾಣದ ಸರ್ಕಾರಿ ಬಸ್ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ 20 ಜನ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇನ್ನು ಟಿಪ್ಪರ್ ಬಸ್ ಮೇಲೆ ಬಿದ್ದ ಪರಿಣಾಮ ಬಸ್ನ ಅರ್ಧಭಾಗ ನಜ್ಜುಗುಜ್ಜಾಗಿದ್ದು, ಟಿಪ್ಪರ್ನಲ್ಲಿದ್ದ ಜಲ್ಲಿ ಕಲ್ಲು ಬಸ್ ತುಂಬಾ ಚೆಲ್ಲಿದೆ. ಹಲವು ಪ್ರಯಾಣಿಕರು ಜಲ್ಲಿಕಲ್ಲಿನ ರಾಶಿಯಲ್ಲಿ ಸಿಲುಕಿದ್ದು, ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ.
ಗಾಯಗೊಂಡ ಹಲವಾರು ಜನರು ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಹಿಳಾ ವಿಶ್ವಕಪ್ ಫೈನಲ್: ಕೈಹಿಡಿದ ಶಫಾಲಿ ವರ್ಮಾ; ದಕ್ಷಿಣ ಆಫ್ರಿಕಾಗೆ ಸವಾಲಿನ ಗುರಿ ನೀಡಿದ ಭಾರತ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


