Saturday, November 7, 2026
spot_img
More
    spot_img
    HomeLatest newsಚಿನ್ನ, ಬೆಳ್ಳಿ ದರ ಏರಿಕೆ;ಬೆಳ್ಳಿ ಕೆಜಿಗೆ ₹3,000 ಏರಿಕೆ! ಇಂದಿನ ದರಗಳ ಪಟ್ಟಿ ಇಲ್ಲಿದೆ 

    ಚಿನ್ನ, ಬೆಳ್ಳಿ ದರ ಏರಿಕೆ;ಬೆಳ್ಳಿ ಕೆಜಿಗೆ ₹3,000 ಏರಿಕೆ! ಇಂದಿನ ದರಗಳ ಪಟ್ಟಿ ಇಲ್ಲಿದೆ 

    ನಿನ್ನೆ (ಮಂಗಳವಾರ) ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನದ ಬೆಲೆ, ಇಂದು ಬುಧವಾರ (ಡಿಸೆಂಬರ್ 3) ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಫೆಡರಲ್ ರಿಸರ್ವ್‌ನಿಂದ (Fed) ಬಡ್ಡಿದರ ಕಡಿತದ ನಿರೀಕ್ಷೆ ಮತ್ತು ಸುರಕ್ಷಿತ ಹೂಡಿಕೆಯ ಬೇಡಿಕೆಯಿಂದಾಗಿ ಬಂಗಾರದ ಬೆಲೆಗಳು ಹೆಚ್ಚಾಗುತ್ತಿವೆ.ಬುಧವಾರದಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.

    ಇಂದು (ಬುಧವಾರ) 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ನಿನ್ನೆಗೆ ಹೋಲಿಸಿದರೆ ಇಂದು ಚಿನ್ನದ ದರ ಪ್ರತಿ ಗ್ರಾಂಗೆ ₹71 ರಷ್ಟು ಹೆಚ್ಚಾಗಿದೆ. ಈ ಏರಿಕೆಯಿಂದಾಗಿ, ಇಂದು ಒಂದು ಗ್ರಾಂ ಚಿನ್ನದ ಬೆಲೆ ₹13,058 ತಲುಪಿದೆ. ಅದೇ ರೀತಿ, 10 ಗ್ರಾಂ ಚಿನ್ನದ ಬೆಲೆಯು ಇಂದು ₹1,30,580 ಆಗಿದ್ದು, ನಿನ್ನೆಗೆ ಹೋಲಿಸಿದರೆ ₹710 ರಷ್ಟು ಹೆಚ್ಚಳ ಕಂಡಿದೆ. 8 ಗ್ರಾಂ ಚಿನ್ನದ ಬೆಲೆ ₹1,04,464 ಹಾಗೂ 100 ಗ್ರಾಂ ಚಿನ್ನದ ಬೆಲೆ ₹13,05,800 ತಲುಪಿದೆ.

    ವಿದೇಶಿ ಮಾರುಕಟ್ಟೆಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರೆದಿದೆ. ಕೆಲವೇ ಕೆಲವು ಕಡೆಗಳಲ್ಲಿ ಬೆಲೆಗಳಲ್ಲಿ ಅಲ್ಪ ಇಳಿಕೆಯಾಗಿದೆ.ಕೆಲವೆಡೆ ಬೆಲೆ ಇಳಿಕೆ ಆಗಿದೆ. ಇನ್ನು ಬೆಳ್ಳಿ ಬೆಲೆ ಮತ್ತೆ 3 ರೂ ಏರಿದೆ. ಇದರ ಬೆಲೆ ಮತ್ತೊಮ್ಮೆ 190 ರೂ ಗಡಿ ದಾಟಿದೆ.

    ಇಂದು ಬುಧವಾರ ಪ್ರತಿ ಕೆಜಿ ಬೆಳ್ಳಿ ಬೆಲೆಯಲ್ಲಿ ₹3000 ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,19,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,30,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,19,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,100 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

    24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,058 ರೂ

    22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,970 ರೂ

    18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,794 ರೂ

    ಬೆಳ್ಳಿ ಬೆಲೆ 1 ಗ್ರಾಂಗೆ: 191 ರೂ

    ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ದರ (ಪ್ರತಿ ಗ್ರಾಂಗೆ)ನಗರಚಿನ್ನದ ಬೆಲೆ (₹)

    ಬೆಂಗಳೂರು11,970

    ಮುಂಬೈ11,970

    ಕೋಲ್ಕತಾ11,970

    ಕೇರಳ11,970

    ಭುವನೇಶ್ವರ್11,970

    ಅಹ್ಮದಾಬಾದ್11,975

    ದೆಹಲಿ11,985

    ಜೈಪುರ್11,985

    ಲಕ್ನೋ11,985

    ಚೆನ್ನೈ12,060

    ವಿಶ್ವದ ಟೆಕ್ ದೈತ್ಯ ಆಪಲ್‌ನ AI ವಿಭಾಗಕ್ಕೆ ಭಾರತೀಯ ನಾಯಕ: ಬೆಂಗಳೂರಿನ ಅಮರ್‌ ಸುಬ್ರಹ್ಮಣ್ಯಗೆ ಮುಖ್ಯಸ್ಥ ಸ್ಥಾನ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search