ರಾಯ್‌ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರದ ಶತಕ ಬಾರಿಸಿದ್ದಾರೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಪರ ಕಣಕ್ಕಿಳಿದಿ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಬೇಗನೆ ವಿಕೆಟ್ ಒಪ್ಪಿಸಿದ ಬಳಿಕ ಮೂರನೇ ವಿಕೆಟ್‌ಗೆ ಜತೆಯಾದ ರುತುರಾಜ್ ಗಾಯಕ್ವಾಡ್ ಹಾಗೂ ವಿರಾಟ್ ಕೊಹ್ಲಿ 195 ರನ್‌ಗಳ ಜತೆಯಾಟವನ್ನಾಡಿದರು. ರುತುರಾಜ್ ಗಾಯಕ್ವಾಡ್ 83 ಎಸೆತಗಳಲ್ಲಿ 105 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 93 ಎಸೆತಗಳಲ್ಲಿ 102 ರನ್ ಬಾರಿಸಿದರು.
ಈ ಶತಕ ಮೂಲಕ ವಿರಾಟ್ ಕೊಹ್ಲಿ ಒಟ್ಟಾರೆ 84ನೇ ಅಂತಾರಾಷ್ಟ್ರೀಯ ಶತಕ ಬಾರಿಸಿದ್ದು, ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ ಬ್ಯಾಟ್‌ನಿಂದ ಬಂದ 53ನೇ ಶತಕ ಇದಾಗಿದೆ. ಇನ್ನು ಕಳೆದ ಕೆಲ ಶತಕಗಳ ಹಾಗೆ ಈ ಶತಕ ಬಾರಿಸಿದಾಗಲೂ ಸಹ ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯನ್ನು ಮುರಿದುಹಾಕಿದ್ದಾರೆ.
ಹೌದು, ಕಳೆದ ಪಂದ್ಯದಲ್ಲಿ ಶತಕ ಬಾರಿಸಿ ಆವೃತ್ತಿಯೊಂದರಲ್ಲಿ ಅತಿಹೆಚ್ಚು ಶತಕ ಬಾರಿಸಿದ ದಾಖಲೆಯಲ್ಲಿ ಸಚಿನ್ ತೆಂಡೂಲ್ಕರ್ ಹಿಂದಿಕ್ಕಿದ್ದ ವಿರಾಟ್ ಕೊಹ್ಲಿ ಈ ಪಂದ್ಯದ ಶತಕದ ಮೂಲಕ ಒಂದೇ ಕ್ರಮಾಂಕದಲ್ಲಿ ಅತಿಹೆಚ್ಚು ಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಈ ಹಿಂದೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದು ಒಟ್ಟು 45 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶತಕ ಬಾರಿಸಿ ಈ ದಾಖಲೆಯನ್ನು ತನ್ನ ಹೆಸರಿನಲ್ಲಿ ಹೊಂದಿದ್ದರು ಸಚಿನ್ ತೆಂಡೂಲ್ಕರ್. ಇದೀಗ ಈ ಶತಕದ ಮೂಲಕ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಒಟ್ಟು 46 ಅಂತಾರಾಷ್ಟ್ರೀಯ ಶತಕಗಳನ್ನು ಪೂರೈಸಿದ್ದಾರೆ.
ಒಂದೇ ಕ್ರಮಾಂಕದಲ್ಲಿ ಅತಿಹೆಚ್ಚು ಶತಕ ಬಾರಿಸಿದವರು:
ವಿರಾಟ್ ಕೊಹ್ಲಿ – ಏಕದಿನದಲ್ಲಿ 46 ( ಮೂರನೇ ಕ್ರಮಾಂಕದಲ್ಲಿ )
ಸಚಿನ್ ತೆಂಡೂಲ್ಕರ್ – ಏಕದಿನದಲ್ಲಿ 45 ( ಆರಂಭಿಕ ಆಟಗಾರ )
ಸಚಿನ್ ತೆಂಡೂಲ್ಕರ್ – ಟೆಸ್ಟ್‌ನಲ್ಲಿ 44 ( ನಾಲ್ಕನೇಕ್ರಮಾಂಕ )
ಕುಮಾರ್ ಸಂಗಾಕ್ಕಾರ – ಟೆಸ್ಟ್‌ನಲ್ಲಿ 37 ( ಮೂರನೇ ಕ್ರಮಾಂಕ )
ಜಾಕ್ಸ್ ಕಾಲೀಸ್ – ಟೆಸ್ಟ್‌ನಲ್ಲಿ 44 ( ನಾಲ್ಕನೇ ಕ್ರಮಾಂಕ )
ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಶತಕ ಬಾರಿಸಿ ಅಬ್ಬರಿಸಿದ ಕೊಹ್ಲಿ; ಬ್ಯಾಕ್‌ಟುಬ್ಯಾಕ್ ಸೆಂಚುರಿ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


