Friday, November 6, 2026
spot_img
More
    spot_img
    HomeLatest newsಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯ: ಕೋಡಿಮಠ ಸ್ವಾಮೀಜಿಗಳ ಭವಿಷ್ಯ!

    ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯ: ಕೋಡಿಮಠ ಸ್ವಾಮೀಜಿಗಳ ಭವಿಷ್ಯ!

    ಅಧಿಕಾರ ಹಸ್ತಾಂತರ, ಬ್ರೇಕ್‌ ಫಾಸ್ಟ್ ಮೀಟಿಂಗ್, ಸಂಪುಟ ಪುನಾರಚನೆ ಸೇರಿದಂತೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ನಡುವೆಯೇ “ಶಿವನ ಪಾದಕ್ಕೆ ಬೀಳಲಿದೆ ಮಲ್ಲಿಗೆ” ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.

    ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯ, ಯುಗಾದಿ ಬಳಿಕ ರಾಷ್ಟ್ರ ರಾಜಕೀಯದಲ್ಲಿ ಹಲವಾರು ಬದಲಾವಣೆಗಳು ಆಗಲಿವೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಸ್ವಾಮೀಜಿ ಹಲವಾರು ವಿಚಾರದ ಕುರಿತು ಮಾತನಾಡಿದ್ದಾರೆ.

    “ಶಿವನ ಮುಡಿಯ ಮೇಲಿರುವ ಮಲ್ಲಿಗೆ ಶಿವನ ಪಾದಕ್ಕೆ ಬೀಳಲೇಬೇಕು” ಎಂದು ಹೇಳಿದರು. ನಾಯಕತ್ವ ಬದಲಾವಣೆ ಗೊಂದಲ ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿ ಬಳಿಕ ಬಗೆಹರಿಯಲಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

    ಸ್ವಾಮೀಜಿಗಳ ಭವಿಷ್ಯ: ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ 2026ರ ಸಂಕ್ರಾಂತಿಯ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ.

    “ಶಿವನ ಮುಡಿಯ ಮೇಲಿರುವ ಮಲ್ಲಿಗೆಯು ಶಿವನ ಪಾದಕ್ಕೆ ಬೀಳಲೇಬೇಕು” ಎಂದು ಹೇಳುವ ಮೂಲಕ ಅಧಿಕಾರ ಹಿಡಿಯುವ ನಿರೀಕ್ಷೆಯಲ್ಲಿ ಇರುವವರಿಗೆ ಸೂಕ್ತ ಫಲಗಳು ದೊರೆಯಲಿದೆ ಎಂದು ಅಂದಾಜಿಸಿದ್ದಾರೆ.

    ಇಂದಿನ ರಾಜಕೀಯದಲ್ಲಿ ತತ್ವ, ಆದರ್ಶಗಳು ಮಾಯವಾಗಿವೆ. ಹಣ ಉಳ್ಳವರು, ರಿಯಲ್ ಎಸ್ಟೇಟ್ ಕುಳಗಳು ರಾಜಕೀಯದಲ್ಲಿ ವಿಜೃಂಭಿಸುತ್ತಿದ್ದಾರೆ. ಪ್ರಜಾಪ್ರಭುತ್ವಕ್ಕೆ ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದ್ದಾರೆ.

    ಈಗ ರಾಜಕಾರಣಿಗಳು ರಾಜಕೀಯವನ್ನು ವೃತ್ತಿ ಮಾಡಿಕೊಂಡಿದ್ದಾರೆ. ಮಠಾಧೀಶರು ಸಮಾಜದ ಒಳಿತಿಗಾಗಿ ರಾಜಕೀಯ ನಾಯಕರಿಗೆ ಏಕೆ ಸಲಹೆ ಕೊಡಬಾರದು? ಎಂದು ಕೋಡಿ ಮಠದ ಶ್ರೀಗಳು ಪ್ರಶ್ನಿಸಿದರು.

    ಮಠಗಳು ಜಾತೀಯತೆಯಿಂದ ದೂರವಿರಬೇಕು. ಜಾತಿ ಪದ್ಧತಿ ನಾಗರಿಕ ಸಮುದಾಯಕ್ಕೆ ಅಂಟಿರುವ ಶಾಪ. ಮಠಾಧೀಶರು ಜಾತಿ ಎಂಬ ಸಂಕೋಲೆಯಿಂದ ಹೊರಬಂದು ಜಾತ್ಯಾತೀ ತ ಸಮಾಜವನ್ನು ನಿರ್ಮಾಣ ಮಾಡಬೇಕು. ಆಗ ಮಾತ್ರ ಬದಲಾವಣೆ ಕಾಣುವುದಕ್ಕೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.

    ನಾನು ಶಾಸ್ತ್ರ ಹೇಳುವವನು ಅಲ್ಲ,  ಶಾಸ್ತ್ರಕಾರನೂ ಅಲ್ಲ. ಮುಂದೆ ನಡೆಯುವ ವಿಚಾರವನ್ನು ತಿಳಿಸುವ ಶಕ್ತಿ ಹೊಂದಿದ್ದೇನೆ. ರಾಷ್ಟ್ರ ರಾಜಕೀಯದಲ್ಲಿಯೂ ಯುಗಾದಿ ಬಳಿಕ ಹೊಸ ಸಮಸ್ಯೆಗಳು ಉದ್ಭವಿಸಲಿವೆ.  ಅಹಿತಕರ ಘಟನೆಗಳು ದೇಶದಲ್ಲಿ ನಡೆಯಲಿವೆ ಎಂದು ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಎಚ್ಚರಿಕೆ ನೀಡಿದರು.

    ಕರ್ನಾಟಕದ ರಾಜಕೀಯದಲ್ಲಿ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯದ ಬಗ್ಗೆ ಅಪಾರವಾದ ನಂಬಿಕೆ ಇದೆ. ಆಗಾಗ ಸ್ವಾಮೀಜಿಗಳು ರಾಜಕೀಯ, ಪ್ರಾಕೃತಿಕ ವಿಕೋಪ ಸೇರಿದಂತೆ ವಿವಿಧ ವಿಚಾರದ ಕುರಿತು ಮಾತುಗಳನ್ನು ಆಡುತ್ತಾರೆ.

    ರಾಜ್ಯದ ಹಲವು ರಾಜಕೀಯ ನಾಯಕರು ಅರಸೀಕರೆಯಲ್ಲಿರುವ ಕೋಡಿಮಠಕ್ಕೆ ಭೇಟಿ ನೀಡುತ್ತಾರೆ. ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ದರ್ಶನ ಪಡೆಯುತ್ತಾರೆ. ಆಗಸ್ಟ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಸನಕ್ಕೆ ಭೇಟಿ ನೀಡಿದಾಗ ಕೋಡಿಮಠಕ್ಕೆ ಭೇಟಿ ನೀಡಿದ್ದರು. ಸ್ವಾಮೀಜಿಗಳ ಕೈಯಲ್ಲಿ ತಾಳೆಗರಿ ಭವಿಷ್ಯವನ್ನು ಕೇಳಿದ್ದರು.

    ಕಾಂಗ್ರೆಸ್‌ನಲ್ಲಿನ ನಾಯಕತ್ವ ಬದಲಾವಣೆ ಬೆಳವಣಿಗೆ ಒಂದು ಹಂತಕ್ಕೆ ಬಂದು ನಿಂತಿದೆ. “ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದೇವೆ. ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ” ಎಂದು ಎರಡು ಉಪಹಾರಕೂಟದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

    “ನನ್ನ ದೆಹಲಿ ಭೇಟಿಯ ವೇಳೆ ಹೈಕಮಾಂಡ್‌ನವರು ಭೇಟಿಗೆ ಅವಕಾಶ ನೀಡಿದರೆ ಅವರನ್ನು ಭೇಟಿ ಮಾಡಲಾಗುವುದು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ನಾಳೆ (ಬುಧವಾರ) ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭೇಟಿಯಾಗುತ್ತೇನೆ” ಎಂದು ಮಂಗಳವಾರ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದರು.

    “ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆಯೂ ಚರ್ಚಿಸಿ ನಿರ್ಧರಿಸಿದ್ದೆವು, ಇಂದೂ ಕೂಡ ಅದನ್ನೇ ಚರ್ಚಿಸಲಾಗಿದೆ. ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ. ಸಿಎಲ್.ಪಿ ಸಭೆ ಕರೆದಾಗ ಪಕ್ಷದ ಎಲ್ಲಾ ಶಾಸಕರೂ ಒಟ್ಟಿಗೆ ಊಟಕ್ಕೆ ಸೇರುತ್ತೇವೆ” ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search