ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿಯ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮಧ್ಯೆದಲ್ಲಿ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೈದಾನ ತೊರೆದಿದ್ದು, ಬುಮ್ರಾ ಅನುಪಸ್ಥಿತಿಯಲ್ಲಿ ಭಾರತ ತಂಡದ ಹಂಗಾಮಿ ನಾಯಕನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ.
ದ್ವಿತೀಯ ದಿನದಾಟದ ಭೋಜನಾ ವಿರಾಮಕ್ಕೂ ಕೆಲ ಹೊತ್ತು ಮುಂಚಿತವಾಗಿ ಜಸ್ಪ್ರೀತ್ ಬುಮ್ರಾ ಮೈದಾನದಿಂದ ಹೊರ ನಡೆದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಆಸ್ಪತ್ರೆಗೆ ತೆರಳುತ್ತಿರುವುದು ಕಂಡು ಬಂದಿದೆ.
ಜಸ್ಪ್ರೀತ್ ಬುಮ್ರಾ ನೋವಿನ ಸಮಸ್ಯೆಗೆ ಒಳಗಾಗಿದ್ದು, ಹೀಗಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ ಮಾಡಿಸುವ ಸಲುವಾಗಿ ಸಿಡ್ನಿಯಲ್ಲಿರುವ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಮೂಲಕ ವರ್ಷಗಳ ಬಳಿಕ ಕಿಂಗ್ ಕೊಹ್ಲಿ ಟೆಸ್ಟ್ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದಾರೆ.
ಹೀಗೆ ನಾಯಕನಾಗಿ ಮತ್ತೆ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸುತ್ತಿರುವುದು ಕೊಹ್ಲಿ ಅಭಿಮಾನಿಗಳಲ್ಲಿ ಸಂತಸವನ್ನು ಹೆಚ್ಚಿಸಿದ್ದು, ಪಂದ್ಯ ಇದೀಗ ಮತ್ತಷ್ಟು ರೋಚಕತೆ ಪಡೆದುಕೊಂಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


