Friday, November 6, 2026
spot_img
More
    spot_img
    HomeLatest newsಬೆಂಗಳೂರು ಮಾತ್ರವಲ್ಲ ಇತರೆ ಜಿಲ್ಲೆಗಳಲ್ಲೂ ಲಭ್ಯವಾಗಲಿದೆ ನಂದಿನಿ ಇಡ್ಲಿ - ದೋಸೆ ಹಿಟ್ಟು; ಯಾವಾಗಿನಿಂದ?

    ಬೆಂಗಳೂರು ಮಾತ್ರವಲ್ಲ ಇತರೆ ಜಿಲ್ಲೆಗಳಲ್ಲೂ ಲಭ್ಯವಾಗಲಿದೆ ನಂದಿನಿ ಇಡ್ಲಿ – ದೋಸೆ ಹಿಟ್ಟು; ಯಾವಾಗಿನಿಂದ?

    ಬೆಂಗಳೂರು: ಕೆಎಂಎಫ್‌ನ ನಂದಿನಿ ಬ್ರ್ಯಾಂಡ್ ಪ್ರಾಯೋಗಿಕವಾಗಿ ಬೆಂಗಳೂರಿನಲ್ಲಿ ಆರಂಭ ಮಾಡಿರುವ ದೋಸೆ ಹಿಟ್ಟು, ಇಡ್ಲಿ ಹಿಟ್ಟಿನ ಮಾರಾಟಕ್ಕೆ ಉತ್ತಮ ಬೇಡಿಕೆ ಕೇಳಿ ಬರುತ್ತಿದ್ದು, ಆರಂಭಿಸಿದ ಮೂರು ದಿನಗಳಲ್ಲೇ 2250 ಮೆಟ್ರಿಕ್ ಟನ್ಗಳಷ್ಟು ಹಿಟ್ಟು ಮಾರಾಟವಾಗಿದೆ. ಭಾರೀ ಯಶಸ್ಸಿನ ಹಿನ್ನೆಲೆ ಮುಂದಿನ ಒಂದು ವಾರದೊಳಗೆ ಇತರ ಜಿಲ್ಲೆಗಳಲ್ಲೂ ನಂದಿನಿ ಹಿಟ್ಟಿನ ಮಾರಾಟ ಆರಂಭ ಮಾಡಲು ಕೆಎಂಎಫ್ ಮುಂದಾಗಿದೆ.

    ನಂದಿನಿ ಪರಿಚಯಿಸಿರುವ ದೋಸೆ ಹಿಟ್ಟಿನಲ್ಲಿ ವೇ-ಪ್ರೊಟೀನ್ ಕೂಡ ಇರುವುದರಿಂದ ಸದ್ಯ ಜಿಮ್, ಡಯಟ್ ಬಗ್ಗೆ ಗಮನಹರಿಸುವವರು ಕೂಡ ಈ ಹಿಟ್ಟಿನ ಮೊರೆಹೋಗುತ್ತಿದ್ದಾರೆ. ಸದ್ಯ ಬೆಂಗಳೂರಲ್ಲಿ 450 ಗ್ರಾಂ ಪ್ಯಾಕ್ ದೋಸೆ ಹಿಟ್ಟಿಗೆ 40 ರೂಪಾಯಿ ಹಾಗೂ 900 ಗ್ರಾಂ ದೋಸೆ ಹಿಟ್ಟಿಗೆ 80 ರೂಪಾಯಿ ದರ ನಿಗದಿಪಡಿಸಲಾಗಿದೆ. ಇದೇ ಪ್ರಥಮ ಬಾರಿಗೆ ದೋಸೆ ಹಿಟ್ಟಿಗೆ ಶೇ.5 ರಷ್ಟು ವೇ-ಪ್ರೋಟಿನ್ ಸೇರಿಸಿ ಜನರಿಗೆ ನೀಡುತ್ತಿದೆ.

    ಈಗಾಗಲೇ ಹಲವು ಉತ್ತಮ ಗುಣಮಟ್ಟದ ಉತ್ಪನ್ನಗಳ ಮೂಲಕ ಜನರ ಮನಗೆದ್ದಿರುವ ನಂದಿನಿ ಬ್ರ್ಯಾಂಡ್, ಇದೀಗ ತನ್ನ ಹೊಸ ಪ್ರಾಡಕ್ಟ್ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾಗಲು ಹೊರಟಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಡಿ.26ರಂದು ನಂದಿನಿ ಬ್ರ್ಯಾಂಡ್ ವತಿಯಿಂದ ಪ್ರಥಮ ಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ-ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದ್ದರು.

    ಸಿಎಂ ಶ್ಲಾಘನೆ: ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಕೂಡ ಹಂಚಿಕೊಂಡಿದ್ದ ಅವರು ”ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳ ಪ್ರಮುಖ ನಗರಗಳಲ್ಲೂ ನಂದಿನಿ ಹಾಲಿಗೆ ಬೇಡಿಕೆ ಬರುತ್ತಿದೆ. ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯ ಸುಪ್ರಸಿದ್ಧ ಲಡ್ಡು ಪ್ರಸಾದವನ್ನು ನಂದಿನಿ ತುಪ್ಪದಿಂದ ಸಿದ್ಧಪಡಿಸಲಾಗುತ್ತಿದೆ. ಹೀಗೆ ನಂದಿನಿಯ ನಾನಾ ಉತ್ಪನ್ನಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದ್ದು, ಕನ್ನಡಿಗರ ಬ್ರ್ಯಾಂಡ್ ಹೆಮ್ಮರವಾಗಿ ಬೆಳೆಯುತ್ತಿದೆ” ಎಂದು ಬರೆದುಕೊಂಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search