ನವದೆಹಲಿ: ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಾಲ್ತುಳಿತ ಪ್ರಕರಣದಲ್ಲಿ 1000 ಜನ ಸಾವನ್ನಪ್ಪಿದ್ದಾರೆ ಎಂದು ನಾನು ಹೇಳಿದ್ದೇನೆ. ಒಂದು ವೇಳೆ ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ಸಾವಿನ ಸಂಖ್ಯೆಯ ಬಗ್ಗೆ ನಿಖರವಾದ ವರದಿಯನ್ನು ಬಿಡುಗಡೆ ಮಾಡಲಿ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಭಾಷಣಕ್ಕೂ ಮೊದಲಿಗೆ ಜನವರಿ.29ರಂದು ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಡಿದ ಸಾವಿರಾರು ಜನರಿಗೆ ಶ್ರದ್ಧಾಂಜಲಿ ಸಲ್ಲಿಸುವುದಾಗಿ ತಿಳಿಸಿದರು. ಈ ವೇಳೆ ಸಭಾಪತಿ ಜಗದೀಪ್ ಧನಕರ್ ಅವರು ಈ ಹೇಳಿಕೆಯನ್ನು ಹಿಂತೆಗೆದುಕೊಳ್ಳುವಂತೆ ಹೇಳಿದರು.
ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಾಲ್ತುಳಿತ ಪ್ರಕರಣದಲ್ಲಿ ತುಂಬಾ ಜನರು ಸಾವನ್ನಪ್ಪಿದ್ದಾರೆ. ಒಂದು ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಹೇಳುತ್ತಿದ್ದೇವೆ. ನಾನು ಹೇಳುವುದು ತಪ್ಪಾದರೆ ಸಾವಿನ ಸಂಖ್ಯೆಯ ಬಗ್ಗೆ ನಿಖರವಾದ ವರದಿ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


