Thursday, September 3, 2026
spot_img
More
    spot_img
    HomeTop Storyಮೈಕ್ರೋ ಫೈನಾನ್ಸ್‌ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು: ಎಂಎಲ್‌ಸಿ ಸಿ.ಟಿ.ರವಿ ಅನುಮಾನ

    ಮೈಕ್ರೋ ಫೈನಾನ್ಸ್‌ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು: ಎಂಎಲ್‌ಸಿ ಸಿ.ಟಿ.ರವಿ ಅನುಮಾನ

    ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದ್ದಾರೆ.

    Advertisement

    ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜನರ ಸಮಸ್ಯೆ ಪರಿಹಾರ ಮಾಡುತ್ತಿದೆ. ಹೀಗೆ ಅನೇಕ ಸಂಸ್ಥೆಗಳು ಒಳ್ಳೆಯ ಕೆಲಸ ಮಾಡುತ್ತಿವೆ. ನಾವು ಮೊದಲು ಕಿರುಕುಳ ಕೊಡುವ ಸಂಸ್ಥೆಗಳಿಗೆ ಕಡಿವಾಣ ಹಾಕಬೇಕು. ಕಡಿವಾಣ ಹಾಕಲು ರಾಜ್ಯದ ಕಾಯ್ದೆಯಲ್ಲಿ ಅವಕಾಶ ಇದೆ. ಆ ಕಾಯ್ದೆಯನ್ನು ನಾವು ಬಳಸಿಕೊಳ್ಳೋಣ. ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ. ಅದನ್ನು ನಾವು ಬಳಕೆ ಮಾಡಿಕೊಳ್ಳೋಣ. ಬಳಕೆ ಆಗುವ ಮುನ್ನ ಶಸ್ತ್ರತ್ಯಾಗ ಮಾತು ಯಾಕೆ? ಎಂದು ತಿರುಗೇಟು ನೀಡಿದ್ದಾರೆ.

    ಇನ್ನು ಮುಂದುವರಿದು ಮಾತನಾಡಿದ ಅವರು, ಇದಕ್ಕೆ ಈ ಹಿಂದೆಯೂ ಕಾಯ್ದೆ ಇತ್ತು. ಆಗ ಕಿರುಕುಳ ಇರಲಿಲ್ಲ ಈಗ ಹಾವಳಿ ಜಾಸ್ತಿ ಆಗಿರುವ ಹಿಂದೆ ಕಾಣದ ಕೈಗಳು ಇರಬಹುದು. ಅಧಿಕಾರಿಗಳ ರೇಟ್‌ ಫಿಕ್ಸ್‌ ಮಾಡೋದ್ರಲ್ಲಿ ಕಾಣದ ಕೈಗಳು ಇವೆ ಎಂದು ಅನುಮಾನ ವ್ಯಕ್ತಪಡಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading