Sunday, November 8, 2026
spot_img
More
    spot_img
    HomeTop StoryIPL 2025: ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ ಟಾಪ್‌ 2 ಭದ್ರಪಡಿಸಿಕೊಳ್ಳಲು ಇನ್ನೆಷ್ಟು ಪಂದ್ಯಗಳಲ್ಲಿ ಗೆಲ್ಲಬೇಕು?

    IPL 2025: ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ ಟಾಪ್‌ 2 ಭದ್ರಪಡಿಸಿಕೊಳ್ಳಲು ಇನ್ನೆಷ್ಟು ಪಂದ್ಯಗಳಲ್ಲಿ ಗೆಲ್ಲಬೇಕು?

    ಬೆಂಗಳೂರು: ನಿನ್ನೆ ( ಮೇ 3 ) ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನಡುವಿನ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 2 ರನ್‌ಗಳ ರೋಚಕ ಜಯ ಸಾಧಿಸಿತು.

    ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಆಟಗಾರರ ಅಬ್ಬರ ಹಾಗೂ ಅಂತಿಮ ಹಂತದಲ್ಲಿ ಶೆಫರ್ಡ್‌ ರೌದ್ರಾವತಾರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 213 ರನ್‌ ಕಲೆಹಾಕಿದ್ದು, 214 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿ ಕೊನೆಯ ಎಸೆತದವರೆಗೂ ಬಂದು ವಿಫಲವಾದ ಚೆನ್ನೈ ಸೂಪರ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 211 ರನ್ ಕಲೆಹಾಕಿತು.

    ಈ ಗೆಲುವಿನ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಅಂಕಪಟ್ಟಿಯಲ್ಲಿ 16 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನಕ್ಕೇರಿದೆ. ಇನ್ನು ಈ ಬಾರಿಯ ಪ್ಲೇಆಫ್‌ ಪ್ರವೇಶಿಸಲು ಕನಿಷ್ಟ 16 ಅಂಕಗಳು ಬೇಕಾಗುವ ಸಾಧ್ಯತೆಗಳು ಹೆಚ್ಚಿದ್ದು, ಆರ್‌ಸಿಬಿ ಈಗಾಗಲೇ ಆ ಅಂಕವನ್ನು ಪಡೆದುಕೊಂಡಿದೆ. ಆರ್‌ಸಿಬಿ ಇನ್ನೂ 3 ಪಂದ್ಯಗಳನ್ನಾಡಲಿದ್ದು ಇದರಲ್ಲಿ ಒಂದು ಪಂದ್ಯವನ್ನು ಗೆದ್ದರೂ 18 ಅಂಕಗಳಾಗಲಿದ್ದು, ಟಾಪ್‌ 2 ಪಡೆದುಕೊಳ್ಳುವ ಸಾಧ್ಯತೆ ಇದೆ. 3 ಪಂದ್ಯಗಳ ಪೈಕಿ 2 ಪಂದ್ಯಗಳನ್ನು ಗೆದ್ದರೆ ಖಚಿತವಾಗಿ ಟಾಪ್‌ 1 ಅಥವಾ 2ನೇ ಸ್ಥಾನ ಪಡೆದುಕೊಳ್ಳಲಿದೆ.

    ಸದ್ಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳ ನಡುವಿನ ಪಂದ್ಯ ಮುಗಿದ ಬಳಿಕ ಅಂಕಪಟ್ಟಿಯಲ್ಲಿ ಯಾವ ತಂಡ ಎಷ್ಟನೇ ಸ್ಥಾನದಲ್ಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

    ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): 11 ಪಂದ್ಯಗಳಲ್ಲಿ 8 ಗೆಲುವು, 3 ಸೋಲು, 16 ಅಂಕ, ನೆಟ್ ರನ್ ರೇಟ್ +0.48

    ಮುಂಬೈ ಇಂಡಿಯನ್ಸ್ (MI): 11 ಪಂದ್ಯಗಳಲ್ಲಿ 7 ಗೆಲುವು, 4 ಸೋಲು, 14 ಅಂಕ, ನೆಟ್ ರನ್ ರೇಟ್ +1.27

    ಗುಜರಾತ್ ಟೈಟಾನ್ಸ್ (GT): 10 ಪಂದ್ಯಗಳಲ್ಲಿ 7 ಗೆಲುವು, 3 ಸೋಲು, 14 ಅಂಕ, ನೆಟ್ ರನ್ ರೇಟ್ +0.87

    ಪಂಜಾಬ್ ಕಿಂಗ್ಸ್ (PBKS): 10 ಪಂದ್ಯಗಳಲ್ಲಿ 6 ಗೆಲುವು, 3 ಸೋಲು, 1 ಡ್ರಾ, 12 ಅಂಕ, ನೆಟ್ ರನ್ ರೇಟ್ +0.20

    ಡೆಲ್ಲಿ ಕ್ಯಾಪಿಟಲ್ಸ್ (DC): 10 ಪಂದ್ಯಗಳಲ್ಲಿ 6 ಗೆಲುವು, 4 ಸೋಲು, 12 ಅಂಕ, ನೆಟ್ ರನ್ ರೇಟ್ +0.362

    ಲಕ್ನೋ ಸೂಪರ್ ಜೈಂಟ್ಸ್ (LSG): 10 ಪಂದ್ಯಗಳಲ್ಲಿ 5 ಗೆಲುವು, 5 ಸೋಲು, 10 ಅಂಕ, ನೆಟ್ ರನ್ ರೇಟ್ -0.325

    ಕೋಲ್ಕತ್ತಾ ನೈಟ್ ರೈಡರ್ಸ್ (KKR): 10 ಪಂದ್ಯಗಳಲ್ಲಿ 4 ಗೆಲುವು, 5 ಸೋಲು, ಒಂದು ಡ್ರಾ, 9 ಅಂಕ, ನೆಟ್ ರನ್ ರೇಟ್ -0.78

    ರಾಜಸ್ಥಾನ್ ರಾಯಲ್ಸ್ (RR): 11 ಪಂದ್ಯಗಳಲ್ಲಿ 3 ಗೆಲುವು, 8 ಸೋಲು, 6 ಅಂಕ, ನೆಟ್ ರನ್ ರೇಟ್ -0.78

    ಸನ್‌ರೈಸರ್ಸ್ ಹೈದರಾಬಾದ್ (SRH): 10 ಪಂದ್ಯಗಳಲ್ಲಿ 3 ಗೆಲುವು, 7 ಸೋಲು, 6 ಅಂಕ, ನೆಟ್ ರನ್ ರೇಟ್ -1.19

    ಚೆನ್ನೈ ಸೂಪರ್ ಕಿಂಗ್ಸ್ (CSK): 11 ಪಂದ್ಯಗಳಲ್ಲಿ 2 ಗೆಲುವು, 9 ಸೋಲು, 4 ಅಂಕ, ನೆಟ್ ರನ್ ರೇಟ್ -1.12


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search