ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರದ್ದು ಇಬ್ಬಗೆಯ ನೀತಿ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಹಾನಗಲ್‌ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು, ಈಗ ಏನು ಮಾತನಾಡುತ್ತಿದ್ದಾರೆ? ಈ ಬಗ್ಗೆ ನೀವೇ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದರು. ಇನ್ನು ದೇವೇಗೌಡರಿಗೆ ಇಬ್ಬಗೆಯ ನೀತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಪದೇ ಪದೇ ಟೀಕೆ ಮಾಡುತ್ತಿತ್ತು. ಈಗ ಅದೇ ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದೆ. ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ಆದರೆ ಅವರು ವಾಸ್ತವಿಕತೆಯ ಆಧಾರದ ಮೇಲೆ ಹೇಳುತ್ತಿರಲಿಲ್ಲ ಎಂದು ಈಗ ಅರ್ಥವಾಗುತ್ತದೆ ಅಲ್ಲವೇ? ಎಂದು ಪ್ರಶ್ನಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


