Saturday, September 19, 2026
spot_img
More
    spot_img
    HomeLatest newsಅಪ್ಪು ನೆನೆದು ನಂದಿನಿ ಬ್ರಾಂಡ್‌ಗೆ ಪ್ರೋತ್ಸಾಹಿಸಿ ಎಂದು ಮನವಿ ಮಾಡಿಕೊಂಡ ಡಿಕೆ ಸುರೇಶ್‌

    ಅಪ್ಪು ನೆನೆದು ನಂದಿನಿ ಬ್ರಾಂಡ್‌ಗೆ ಪ್ರೋತ್ಸಾಹಿಸಿ ಎಂದು ಮನವಿ ಮಾಡಿಕೊಂಡ ಡಿಕೆ ಸುರೇಶ್‌

    ಬೆಂಗಳೂರು: ಬಮೂಲ್‌ ಅಧ್ಯಕ್ಷನಾಗಿ ಆಯ್ಕೆಯಾಗಿರುವ ಡಿಕೆ ಸುರೇಶ್‌ ನಂದಿನಿ ಬ್ರಾಂಡ್‌ ಅನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಹೊಸ ಯೋಜನೆಗಳನ್ನು ರೂಪಿಸುವುದಾಗಿ ಹೇಳಿದ್ದು, ಸದ್ಯ ಸಂಬಂಧಪಟ್ಟ ಅಧಿಕಾರಿಗಳ ಜತೆ ಸತತ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

    Advertisement

    ಕನಕಪುರ ತಾಲೂಕಿನ ಶಿವನಹಳ್ಳಿಯ ಬಮೂಲ್ ಡೈರಿಗೆ ಭೇಟಿ ನೀಡಿ ಉತ್ಪಾದನಾ ಘಟಕವನ್ನು ಪರಿಶೀಲಿಸಿದ ಡಿಕೆ ಸುರೇಶ್‌ ಘಟಕ ದಲ್ಲಿ ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ನಂದಿನಿಯ ವಿವಿಧ ಉತ್ಪನ್ನಗಳನ್ನು ತಯಾರಿಸಿ ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ. ಮಾರುಕಟ್ಟೆಯನ್ನು ವಿಸ್ತರಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಂದಿನಿ ಡೈರಿ ಖಂಡಿತ ಒಂದು ಮಾದರಿ ಎಂದು ಹೇಳಿದರು.

    ಪುನೀತ್‌ ರಾಜ್‌ಕುಮಾರ್‌ ಫೋಟೊ ಇರುವ ಜಾಹೀರಾತು ಸ್ಟ್ಯಾಂಡಿ ಬಳಿ ನಿಂತು ಫೋಟೊ ಕ್ಲಿಕ್ಕಿಸಿಕೊಂಡಿದ್ದು, ಈ ಫೋಟೊವನ್ನು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಡಿಕೆ ಸುರೇಶ್‌ ʼನಂದಿನಿ‌ ಉತ್ಪನ್ನಗಳು ಜಾಗತಿಕ ಮಟ್ಟದಲ್ಲೂ ಗುರುತಿಸಿಕೊಂಡಿದ್ದು, ಪರಿಶುದ್ಧತೆ ಹಾಗೂ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ನಂದಿನಿ ಉತ್ಪನ್ನಗಳನ್ನು ಹೆಚ್ಚು ಬಳಸೋಣ, ನಮ್ಮ ರೈತರ ಬದುಕನ್ನು ಹಸನಾಗಿಸೋಣ. ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ನಂದಿನಿ ಉತ್ಪನ್ನಗಳಿಗೆ ರಾಯಭಾರಿಯಾಗಿದ್ದನ್ನು ನಾನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳುತ್ತೇನೆ. ಕನ್ನಡಿಗರೆಲ್ಲರೂ ಒಂದಾಗಿ ನಮ್ಮ ಅಸ್ಮಿತೆಯಾದ ನಂದಿನಿ ಬ್ರಾಂಡ್‌ಗೆ ಪ್ರೋತ್ಸಾಹಿಸೋಣʼ ಎಂದು ಬರೆದುಕೊಂಡಿದ್ದಾರೆ.

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

    ಟಿವಿಕೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading