Tuesday, March 24, 2026
spot_img
More
    spot_img
    HomeLatest newsಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ ಪ್ರಲ್ಹಾದ್‌ ಜೋಶಿ

    ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ ಪ್ರಲ್ಹಾದ್‌ ಜೋಶಿ

    ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸಿ ಯಾರೊಬ್ಬರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ್ದಾರೆ.

    ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ಜಿಲ್ಲಾ ಘಟಕದಲ್ಲಿ ಉಂಟಾಗಿರುವ ಬಿಕ್ಕಟ್ಟು ಪರಿಹಾರ ಕುರಿತಂತೆ ಪ್ರಮುಖರ ಜೊತೆ ಸಭೆ ನಡೆಸಿದರು.

    ನಂತರ ಪ್ರಹ್ಲಾದ್ ಜೋಷಿ ಅವರು ದಾವಣಗೆರೆ ಜಿಲ್ಲಾ ಘಟಕದ ಪ್ರಮುಖರ ಜೊತೆ ಸಭೆ ನಡೆಸಿ ಪಕ್ಷದೊಳಗೆ ಉಂಟಾಗಿರುವ ಭಿನ್ನಮತವನ್ನು ಶಮನಗೊಳಿಸುವ ಪ್ರಯತ್ನ ಮಾಡಿದರು. ಸಭೆಯಲ್ಲಿ ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣಕಾಚಾರ್ಯ, ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು.

    ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷಕ್ಕೆ ಉಂಟಾದ ಹಿನ್ನಡೆಗೆ ಕಾರಣ ಏನೆಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು.

    ದಾವಣಗೆರೆ ಬಿಜೆಪಿಯ ಭದ್ರಕೋಟೆಯಾಗಿತ್ತು. ಸತತ ನಾಲ್ಕು ಬಾರಿ ನಮ್ಮ ಅಭ್ಯರ್ಥಿ ಗೆದ್ದಿದ್ದರು. ಈ ಬಾರಿ ಕೆಲವೇ ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ. ನಾಯಕರಲ್ಲಿ ಪರಸ್ಪರ ಉಂಟಾದ ಗೊಂದಲ, ಅಪನಂಬಿಕೆಯೇ ಸೋಲಿಗೆ ಕಾರಣ ಎಂದು ಜೋಷಿ ಹೇಳಿದ್ದಾರೆ.

    ಇನ್ನು ಮುಂದೆ ಯಾರೊಬ್ಬರೂ ಪಕ್ಷದ ಅನುಮತಿ ಇಲ್ಲದೆ ಮಾತನಾಡಬಾರದು. ನಿಮ್ಮ ಹೇಳಿಕೆಗಳು ಪಕ್ಷದಲ್ಲಿ ಬೆಂಬಲ ಸೃಷ್ಟಿಸುತ್ತವೆ. ಯಾರಿಗೆ ಯಾವ ಜವಾಬ್ದಾರಿ ಇರುತ್ತದೆಯೋ ಅದನ್ನು ಅರಿತು ಮಾತನಾಡಿ. ಅನಗತ್ಯವಾಗಿ ಗೊಂದಲ ಸೃಷ್ಟಿಸಬೇಡಿ ಎಂದು ಸಲಹೆ ಮಾಡಿದ್ದಾರೆಂದು ಗೊತ್ತಾಗಿದೆ.

    ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿ ಪದೇ ಪದೇ ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡಿದ್ದರಿಂದಲೇ ಪಕ್ಷವು ಅವರನ್ನು ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟನೆ ಮಾಡಿತು. ವರಿಷ್ಠರು ಪ್ರತಿಯೊಂದನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಯಾರಿಗೆ ಯಾವ ಸಂದರ್ಭದಲ್ಲಿ ಲಗಾಮು ಹಾಕಬೇಕು ಎಂಬುದು ಗೊತ್ತಿದೆ. ಅನಗತ್ಯವಾಗಿ ಮಾತನಾಡಿ ನಿಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

    ಭಾರತ vs ಇಂಗ್ಲೆಂಡ್‌ 2ನೇ ಟೆಸ್ಟ್: ಮಕಾಡೆ ಮಲಗಿದ್ದ ಇಂಗ್ಲೆಂಡ್‌ಗೆ ಬ್ರೂಕ್‌, ಜೆಮಿ ಸ್ಮಿತ್‌ ಶತಕದ ಆಸರೆ

    ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್! ರೂಪಾಯಿ ಕುಸಿತ—ಮೊದಲ ಬಾರಿಗೆ ₹93 ದಾಟಿದ ಡಾಲರ್, ಆರ್ಥಿಕತೆಗೆ ಶಾಕ್!

    “ರೂಪಾಯಿ ಕುಸಿತ 93” ಇದೀಗ ದೇಶದ ಆರ್ಥಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ, ಭಾರತೀಯ ರೂಪಾಯಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು ₹93 ಗಡಿ...

    ತೆಲಂಗಾಣ ಬಜೆಟ್ 2026: ಆರೋಗ್ಯ ಕ್ಷೇತ್ರಕ್ಕೆ ಭಾರೀ ಉತ್ತೇಜನ—₹1286 ಕೋಟಿ ಹೆಚ್ಚಳ!

    “ತೆಲಂಗಾಣ ಆರೋಗ್ಯ ಬಜೆಟ್ 2026” ಈಗ ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ದೊಡ್ಡ ಮಟ್ಟದ ಹೂಡಿಕೆ ಮಾಡಿದ್ದು, ಹೆಚ್ಚುವರಿ ₹1286 ಕೋಟಿ ಅನುದಾನ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading