ಬೆಂಗಳೂರು: ಎಫ್‌ಐಆರ್ ಪ್ರಶ್ನಿಸಿ ಎಂಎಲ್‌ಸಿ ರವಿಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ರವಿಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ತುರ್ತು ವಿಚಾರಣೆ ನಡೆಸುವಂತೆ ಪರ ವಕೀಲರು ಮನವಿ ಮಾಡಿದ್ದು, ಮನವಿ ಪರಿಗಣಿಸಿರುವ ಹೈಕೋರ್ಟ್ ಇಂದು ಮಧ್ಯಾಹ್ನದ ಬಳಿಕ ವಿಚಾರಣೆಗೆ ಸಮ್ಮತಿ ನೀಡಿದೆ.
ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ರವಿಕುಮಾರ್ ವಿರುದ್ಧ ಜೆ.ಪಿ.ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರವಿಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಪ್ರಕರಣ ದಾಖಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾಗರತ್ನ, ರವಿಕುಮಾರ್ ಒಂದು ಹೆಣ್ಣಿಗೆ ಗೌರವವನ್ನು ಕೊಟ್ಟಿಲ್ಲ. ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ರವಿಕುಮಾರ್ ಅವರಿಗೆ ತಾಯಿ, ತಂಗಿ, ಅಕ್ಕ ಇಲ್ವಾ? ಅವರೆಲ್ಲರೂ ಒಂದು ಹೆಣ್ಣು ತಾನೆ? ರವಿಕುಮಾರ್ ವಿರುದ್ಧ ಮಹಿಳಾ ಆಯೋಗಕ್ಕೂ ದೂರು ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಪ್ರತಿಭಟನೆಗೆಂದು ಚಾ. ನಗರದಿಂದ ಬೆಂಗಳೂರಿಗೆ ಬಂದಿದ್ದ ರೈತ ರೈಲು ನಿಲ್ದಾಣದಲ್ಲಿ ಹೃದಯಾಘಾತದಿಂದ ಸಾವು!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


