ಬೆಂಗಳೂರು: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ನಾಲಿಗೆ ಜಾಸ್ತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರವಿಕುಮಾರ್ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯ ಕಾರ್ಯದರ್ಶಿ ವಿರುದ್ಧ ರವಿಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಪ್ರಶ್ನೆ ಎದುರಾಗುತ್ತಿದ್ದಂತೆ ಅವರ ನಾಲಿಗೆ ಜಾಸ್ತಿಯಾಯಿತು ಎಂದು ಸಿಟ್ಟಾದರು. ಹೆಚ್ಚಿನ ಪ್ರತಿಕ್ರಿಯೆ ನೀಡದೇ ತಮ್ಮ ಮಾತನ್ನು ಅರ್ಧಕ್ಕೆ ನಿಲ್ಲಿಸಿ ಅಲ್ಲಿಂದ ನಿರ್ಗಮಿಸಿದರು.
ರವಿಕುಮಾರ್ ಆಡಿರುವ ಮಾತುಗಳ ಬಗ್ಗೆ ಸರ್ಕಾರದ ಹಲವಾರು ಮಂದಿ ಸಚಿವರು ಆಕ್ರೋಶ ಹೊರಹಾಕಿದ್ದಾರೆ. ಈಗಾಗಲೇ ಎಫ್‍ಐಆರ್ ಕೂಡ ದಾಖಲಾಗಿದೆ. ಐಎಎಸ್ ಅಧಿಕಾರಿಗಳ ಸಂಘ ಹೇಳಿಕೆಯನ್ನು ಖಂಡಿಸಿದ್ದು, ಕಾನೂನು ರೀತಿಯ ಕ್ರಮಕ್ಕೆ ಒತ್ತಾಯ ಮಾಡಿದೆ. ಎಫ್‍ಐಆರ್ ದಾಖಲಾಗುತ್ತಿದ್ದಂತೆ ವಿವಾದ ಮತ್ತೊಂದು ಮಗ್ಗುಲು ತಿರುಗಿದೆ.
ಎಲ್ಲಾ ಸಚಿವರು, ಕಾಂಗ್ರೆಸ್ ಮುಖಂಡರು ರವಿಕುಮಾರ್ ಹೇಳಿಕೆಯನ್ನು ಖಂಡಿಸಲಾರಂಭಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಎಚ್ಚರಿಕೆಯಿಂದ ಮಾತನಾಡಬೇಕು. ಈ ಮೊದಲು ಬಿಜೆಪಿಯ ಕೆಲ ನೇತಾರರ ಮಾತುಗಳಿಂದ ಪಕ್ಷಕ್ಕೆ ಮುಜುಗರ ಉಂಟಾಗಿತ್ತು ಎಂದು ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಎನ್.ರವಿಕುಮಾರ್ ಅವರ ನಾಲಗೆ ಉದ್ದವಾಯಿತು ಎಂಬರ್ಥದಲ್ಲಿ ಸಿಡಿಮಿಡಿ ವ್ಯರ್ಥಪಡಿಸಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.
ಪ್ರತಿಭಟನೆಗೆಂದು ಚಾ. ನಗರದಿಂದ ಬೆಂಗಳೂರಿಗೆ ಬಂದಿದ್ದ ರೈತ ರೈಲು ನಿಲ್ದಾಣದಲ್ಲಿ ಹೃದಯಾಘಾತದಿಂದ ಸಾವು!
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


