ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಿತು. ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ.
ಚೀನಾ 2,000 ಚದರ ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡು, 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸಿರುವುದರ ಬಗ್ಗೆ ಒಂದೇ ಒಂದು ಪ್ರಶ್ನೆಯನ್ನು ಕೇಳುವುದಿಲ್ಲ ಎಂದು ರಾಹುಲ್ ಹೇಳಿದ್ದರು.ಚೀನಾದಿಂದ ಭಾರತದ ಭೂ ಕಬಳಿಕೆ ಹೇಳಿಕೆ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಚೀನಾ ಸೇನೆ ಭಾರತದ ಸುಮಾರು 2 ಸಾವಿರ ಕಿಮೀ ಭೂಮಿ ಕಬಳಿಸಿದೆ ಎಂದು ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಈ ವಿಚಾರ ನಿಮಗೆ ಹೇಗೆ ಗೊತ್ತಿತ್ತು? ಎಂದು ಪ್ರಶ್ನಿಸಿದೆ.
2000 ಕಿ.ಮೀ. ಭಾರತದ ಭೂಮಿಯನ್ನು ಚೀನಿಯರು ವಶಪಡಿಸಿಕೊಂಡಿದ್ದಾರೆ ಎಂದು ನಿಮಗೆ ಹೇಗೆ ತಿಳಿಯಿತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಇದನ್ನೆಲ್ಲಾ ಹೇಳುವುದಿಲ್ಲ ಎಂದು ನ್ಯಾಯಮೂರ್ತಿ ದತ್ತ ಅವರು ಹೇಳಿದ್ದಾರೆ. ಅಷ್ಟು ನಿರ್ಧಿಷ್ಟವಾಗಿ ಯಾವ ಗ್ಯಾರಂಟಿ ಮೇಲೆ ನೀವು ಹೇಳುತ್ತೀರಿ. ಇದು ನಿಮಗೆ ಹೇಗೆ ತಿಳಿಯಿತು ಎಂದು ರಾಹುಲ್ ಗಾಂಧಿ ಪರ ವಕೀಲರನ್ನು ಪ್ರಶ್ನೆ ಮಾಡಿದರು.
ನೀವೊಬ್ಬ ಜವಾಬ್ದಾರಿಯುತ ಪ್ರತಿಪಕ್ಷದ ನಾಯಕ. ಕೇವಲ ಹೊರಗಡೆ ಆರೋಪ ಮಾಡುವುದು ಸರಿಯಲ್ಲ. ಸೂಕ್ಷ್ಮ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಶ್ನೆ ಮಾಡಬಹುದು. ಅಲ್ಲಿ ಮಾತ್ರ ಪ್ರಶ್ನೆ ಕೇಳದೆ ಸಾರ್ವಜನಿಕವಾಗಿ ಆರೋಪ ಮಾಡುವುದು ಸರಿಯೇ? ಎಂದು ಪ್ರಶ್ನಿಸಿದರು.
ರಾಹುಲ್ ಗಾಂಧಿ ಪರ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ, ವಿರೋಧ ಪಕ್ಷದ ನಾಯಕರೊಬ್ಬರು ಸಮಸ್ಯೆಗಳನ್ನು ಎತ್ತಲು ಸಾಧ್ಯವಾಗದಿದ್ದರೆ, ಅದು ದುರದೃಷ್ಟಕರ ಪರಿಸ್ಥಿತಿಯಾಗುತ್ತದೆ. ಪತ್ರಿಕೆಗಳಲ್ಲಿ ಪ್ರಕಟವಾಗುವ ವಿಷಯಗಳನ್ನು ಅವರು ಹೇಳಲು ಸಾಧ್ಯವಾಗದಿದ್ದರೆ, ಅವರು ವಿರೋಧ ಪಕ್ಷದ ನಾಯಕರಾಗಲು ಸಾಧ್ಯವಿಲ್ಲ ಎಂದು ಹೇಳಿದರು.
ಆಗ ನ್ಯಾಯಮೂರ್ತಿ ದತ್ತ ಅವರು, ಹಾಗಾದರೆ ನೀವು ಇಂಥ ವಿಷಯಗಳನ್ನು ಏಕೆ ಸಂಸತ್‌ನಲ್ಲಿ ಪ್ರಶ್ನೆ ಮಾಡಬಾರದು. ಕೇವಲ ಸಾರ್ವಜನಿಕ ವೇದಿಕೆಗಳಲ್ಲಿ ಮಾತ್ರ ಮಾತನಾಡಬೇಕೆ? ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದಕ್ಕಷ್ಟೇ ಸೀಮಿತವೇ? ಎಂದು ತರಾಟೆಗೆ ತೆಗೆದುಕೊಂಡರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


