Friday, September 4, 2026
spot_img
More
    spot_img
    HomeLatest newsಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್‌ ವಿಧಿವಶ

    ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್‌ ವಿಧಿವಶ

    ರಾಂಚಿ: ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್‌ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

    Advertisement

    ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಶಿಬು ಸೊರೇನ್‌ ಅವರನ್ನು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

    ಕಳೆದ ಒಂದು ತಿಂಗಳಿಗೂ ಹೆಚ್ಚು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಇತ್ತೀಚೆಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ.

    ತಂದೆಯ ನಿಧನದ ಮಾಹಿತಿಯನ್ನು ಪುತ್ರ ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೇಣ್‌ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರೀತಿಯ ದಿಶೋಮ್‌ ಗುರೂಜಿ ನಮ್ಮನ್ನು ಅಗಲಿದ್ದಾರೆ. ನಾನಿಂದು ಎಲ್ಲವನ್ನೂ ಕಳೆದುಕೊಂಡೆ ಎಂದು ಭಾವುಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

    ಜಾರ್ಖಂಡ್‌ ಮುಕ್ತಿ ಮೋರ್ಚಾದ ಮುಖಂಡರಾದ ಶಿಬು ಸೊರೇನ್‌ ಅವರು ಕಳೆದ 38 ವರ್ಷಗಳಿಂದ ಪಕ್ಷದ ಚುಕ್ಕಾಣಿ ಹಿಡಿದಿದ್ದರು. 4 ದಶಕಗಳ ಕಾಲ ರಾಜಕೀಯ ಜೀವನದಲ್ಲಿ ಶಿಬು ಸೊರೇನ್‌ ತಮ್ಮದೇ ಛಾಪು ಮೂಡಿಸಿದ್ದಾರೆ. 8 ಬಾರಿ ಲೋಕಸಭೆಗೆ, ಎರಡು ಅವಧಿಗೆ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದರು.

    ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಶಾಕ್:‌ ರಜೆ ಹಾಗೂ ವಾರದ ರಜೆ ರದ್ದು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading