Sunday, August 30, 2026
spot_img
More
    spot_img
    HomeLifestyleಇವುಗಳನ್ನು ತಿಂದರೆ ನೆನಪಿನ ಶಕ್ತಿ ಹೆಚ್ಚಾಗುತ್ತದೆ; ಮರೆವು ದೂರವಾಗುತ್ತದೆ

    ಇವುಗಳನ್ನು ತಿಂದರೆ ನೆನಪಿನ ಶಕ್ತಿ ಹೆಚ್ಚಾಗುತ್ತದೆ; ಮರೆವು ದೂರವಾಗುತ್ತದೆ

    Advertisement

    ಜ್ಞಾಪಕಶಕ್ತಿಯನ್ನು ಹೆಚ್ಚಿಸುವ ಆಹಾರಗಳು ಪ್ರತಿಯೊಬ್ಬರ ಆಹಾರದ ಅವಿಭಾಜ್ಯ ಅಂಗವಾಗಿದೆ. ನೆನಪಿನ ಶಕ್ತಿ ಮತ್ತು ಏಕಾಗ್ರತೆಯನ್ನು ಸುಧಾರಿಸುವ ಆಹಾರಗಳನ್ನು  ಸೇವಿಸುವುದು  ವಿದ್ಯಾರ್ಥಿಗಳಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ, ಈ ಆಹಾರಗಳು ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ. 

    ನೆನಪಿನ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗುವ ಆಹಾರಗಳು ಯಾವಾವು ? ಸಾಮಾನ್ಯವಾಗಿ ಒಮೆಗಾ-3 ಕೊಬ್ಬಿನಾಮ್ಲಗಳು, ವಿಟಮಿನ್ ಡಿ, ವಿಟಮಿನ್ ಬಿ (ಸಂಕೀರ್ಣ), ಕೋಲೀನ್ ಮತ್ತು ಮೆಗ್ನೀಸಿಯಮ್‌ಗಳಲ್ಲಿ ಸಮೃದ್ಧವಾಗಿವೆ. ಮೆದುಳಿನ ಆರೋಗ್ಯವನ್ನು ಕಾಪಾಡುವಲ್ಲಿ ಈ ಜೀವಸತ್ವಗಳು ಮತ್ತು ಖನಿಜಗಳು ಪ್ರಮುಖ ಪಾತ್ರವಹಿಸುತ್ತವೆ. 

    ನಮ್ಮ ಆಹಾರ ಕ್ರಮವು ನಮ್ಮ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ. ಆಹಾರದಲ್ಲಿ ಹೆಚ್ಚು ಸಕ್ಕರೆ ಸೇವಿಸುವವರ ಜ್ಞಾಪಕ ಶಕ್ತಿ ಕುಂಠಿತವಾಗುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ. ಆದ್ದರಿಂದ ಉತ್ತಮ ಸ್ಮರಣೆಗಾಗಿ ನೀವು ಸಕ್ಕರೆಯ ಬಳಕೆಯನ್ನು ನಿಯಂತ್ರಿಸುವುದು ಮುಖ್ಯವಾಗಿದೆ.

    ದಿನಾ ಒಂದು ಬ್ರಾಹ್ಮೀ ಎಲೆ ಸಾಕು ಬುದ್ಧಿ ಶಕ್ತಿ ಹೆಚ್ಚುವುದು, ಮರೆವಿನ ಕಾಯಿಲೆ ಕಡಿಮೆಯಾಗುವುದು. ಬ್ರಾಹ್ಮೀ ಪುಡಿಯನ್ನು ಹಾಲಿನಲ್ಲಿ ಮಿಶ್ರ ಮಾಡಿ ಪ್ರತಿದಿನ ಬೆಳಗ್ಗೆ ಕುಡಿದರೆ ಮರೆವಿನ ಸಮಸ್ಯೆ ಉಂಟಾಗುವುದಿಲ್ಲ.

    ಒಂದು ಕಪ್ ಹಾಲು ಕುದಿಸಿ, ಅದಕ್ಕೆ ಬಾದಾಮಿ, ಕಲ್ಲು ಸಕ್ಕರೆ ಹಾಕಿ ಕುಡಿಯುವುದರಿಂದ ನೆನಪಿನ ಶಕ್ತಿ ಹೆಚ್ಚುವುದು. ಅಶ್ವಗಂಧವನ್ನು ಆಯುರ್ವೇದದಲ್ಲಿ ಬಳಸಲಾಗುತ್ತದೆ. ಇದನ್ನು ಪ್ರತಿದಿನ ನಿಯಮಿತವಾಗಿ ಸೇವಿಸಿದರೆ ಮೆದುಳಿನ ನರಗಳು ಬಲವಾಗಿ ನೆನಪಿನ ಶಕ್ತಿ ಹೆಚ್ಚುತ್ತದೆ.

    ತುಪ್ಪ ಒಳ್ಳೆಯ ಕೊಲೆಸ್ಟ್ರಾಲ್ ಆಗಿದೆ. ಆದ್ದರಿಂದ ತುಪ್ಪ ಸೇವಿಸಿ. ತುಪ್ಪ ತಿನ್ನುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳನ್ನು ನೋಡಬಹುದು. ಪ್ರತಿದಿನ ಶುದ್ಧ ತುಪ್ಪವನ್ನು ಮಿತಿಯಲ್ಲಿ ಸೇವಿಸಿದರೆ ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

    ಬೂದುಗುಂಬಳಕಾಯಿ ಬೇಯಿಸಿ ಆ ರಸಕ್ಕೆ ಸ್ವಲ್ಪ ತುಪ್ಪ ಹಾಗೂ ಕಲ್ಲು ಸಕ್ಕರೆ ಸೇರಿಸಿ ಸೇವಿಸಿದರೆ ಬುದ್ಧಿಶಕ್ತಿ ಹೆಚ್ಚುವುದು, ಮರೆವಿನ ಸಮಸ್ಯೆ ಕಡಿಮೆಯಾಗುವುದು. 

    ,ಡಿಕಥ್ಲಾನ್‌ ಭಾರತದಲ್ಲಿ €100 ಮಿಲಿಯನ್‌ ಹೂಡಿಕೆ !


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading