ರಷ್ಯಾದಿಂದ ಶಸ್ತ್ರಾಸ್ತ್ರಗಳನ್ನು ಹಾಗೂ ಕಚ್ಚಾ ತೈಲವನ್ನು ಖರೀದಿಸುತ್ತಿರುವುದಕ್ಕೆ ಭಾರತದ ಮೇಲೆ ದಂಡ ವಿಧಿಸಲಾಗುತ್ತದೆ ಎಂದು ಟ್ರಂಪ್ ಅವರು ಜುಲೈ ಕೊನೆಯಲ್ಲಿ ಹೇಳಿದ್ದಾರೆ. ರಷ್ಯಾದಿಂದ ತೈಲ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದನ್ನು ತಡೆಯುವ ಉದ್ದೇಶದಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಸರಕುಗಳ ಮೇಲೆ ಶೇ.25ರಷ್ಟು ಸುಂಕ ಹಾಗೂ ದಂಡ ವಿಧಿಸಿತ್ತು. ಆದರೆ, ಯಾವುದೇ ಕಾರಣಕ್ಕೂ ರಷ್ಯಾ ಜೊತೆಗಿನ ವ್ಯಾಪಾರ ವ್ಯವಹಾನ ನಿಲ್ಲಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ಭಾರತ ಮುಂದುವರಿಸುವುದು ಸ್ವೀಕಾರಾರ್ಹವಲ್ಲ ಎಂದು ಟ್ರಂಪ್ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ’ ಎಂದೂ ಅವರು ಹೇಳಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಸಲಹೆಗಾರರಾದ ಸ್ಟೀಫನ್ ಮಿಲ್ಲರ್, ಭಾರತದ ವಿರುದ್ಧ ಆರೋಪಿಸಿದ್ದಾರೆ. ರಷ್ಯಾ ತೈಲವನ್ನು ಖರೀದಿಸುವ ಮೂಲಕ ಉಕ್ರೇನ್ ಯುದ್ಧಕ್ಕೆ ಭಾರತ ಪರೋಕ್ಷವಾಗಿ ಹಣಕಾಸು ನೆರವು ನೀಡುತ್ತಿದೆ ಎಂದು ಟೀಕಿಸಿದ್ದಾರೆ.
ಈ ವರ್ಷದ ಮೊದಲ ಆರು ತಿಂಗಳ ಅವಧಿಯಲ್ಲಿ ಭಾರತವು ಆಮದು ಮಾಡಿಕೊಂಡಿರುವ ಕಚ್ಚಾ ತೈಲದಲ್ಲಿ ರಷ್ಯಾದ ಪಾಲು ಶೇ 35ರಷ್ಟಿದೆ. ಜನವರಿಯಿಂದ ಜೂನ್‌ವರೆಗಿನ ಅವಧಿಯಲ್ಲಿ ಭಾರತವು ರಷ್ಯಾದಿಂದ ಪ್ರತಿದಿನ 17.5 ಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಖರೀದಿಸಿದೆ.
ದಂಡ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬೆದರಿಕೆ ಒಡ್ಡಿದ್ದರೂ, ರಷ್ಯಾದಿಂದ ಕಚ್ಚಾ ತೈಲ ಖರೀದಿ ಮುಂದುವರಿಯಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ. “ಇವು ದೀರ್ಘಾವಧಿಯ ತೈಲ ಒಪ್ಪಂದಗಳು” ಎಂದು ಮೂಲವೊಂದು ತಿಳಿಸಿದೆ. “ರಾತ್ರೋರಾತ್ರಿ ಖರೀದಿಯನ್ನ ನಿಲ್ಲಿಸುವುದು ಅಷ್ಟು ಸುಲಭವಲ್ಲ” ಎಂದಿದೆ.
ರಷ್ಯಾದಿಂದ ಆಮದು ಮಾಡಿಕೊಳ್ಳುವ ಕಚ್ಚಾ ತೈಲವು ಭಾರತದ ಶಕ್ತಿ ಭದ್ರತೆಗೆ ಪ್ರಮುಖವಾಗಿದೆ. ಈ ನಿರ್ಧಾರವು ಭಾರತದ ಆರ್ಥಿಕ ಹಿತಾಸಕ್ತಿಗಳನ್ನು ಕಾಪಾಡುವ ಜೊತೆಗೆ, ರಷ್ಯಾದೊಂದಿಗಿನ ದೀರ್ಘಕಾಲಿಕ ಕಾರ್ಯತಂತ್ರದ ಸಂಬಂಧವನ್ನು ಬಲಪಡಿಸುತ್ತದೆ.
,ಡೆತ್ ನೋಟ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಜಾನಪದ ಗಾಯಕಿಯ ಮಗ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


