ಲಂಡನ್: ಓವಲ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 6 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಸರಣಿ 2 -2 ಅಂಕಗಳೊಂದಿಗೆ ಡ್ರಾನದಲ್ಲಿ ಅಂತ್ಯಗೊಂಡಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 224 ರನ್‌ಗೆ ಆಲ್‌ಔಟ್ ಆಗಿತ್ತು. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 247 ರನ್‌ಗಳಿಗೆ ಆಲ್‌ಔಟ್ ಆಗಿ 23 ರನ್‌ಗಳ ಮುನ್ನಡೆಯನ್ನು ಸಾಧಿಸಿತು. ಇನ್ನು ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 396 ರನ್ ಕಲೆಹಾಕಿ ಇಂಗ್ಲೆಂಡ್‌ಗೆ 374 ರನ್‌ಗಳ ಗುರಿಯನ್ನು ನೀಡಿತ್ತು.
ಕೈನಲ್ಲಿ ಎರಡು ದಿನಗಳು ಹಾಗೂ ಹತ್ತು ವಿಕೆಟ್ ಇದ್ದರೂ ಸಹ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯತೆಯಿಂದಾಗಿ 367 ರನ್‌ಗಳಿಗೆ ಆಲ್‌ಔಟ್ ಆಯಿತು.
ಹೀಗೆ ಕೊನೆ ಪಂದ್ಯದಲ್ಲಿ ಗೆದ್ದ ಭಾರತ ಸರಣಿಯನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಸರಣಿಯಲ್ಲಿ ಅತಿಹೆಚ್ಚು ರನ್ ಬಾರಿಸಿದವರು ಹಾಗೂ ಹೆಚ್ಚು ವಿಕೆಟ್ ಪಡೆದವರು ಯಾರು ಎಂಬುದು ಬಹಿರಂಗವಾಗಿದೆ.
5 ಟೆಸ್ಟ್‌ಗಳ 10 ಇನ್ನಿಂಗ್ಸ್‌ನಲ್ಲಿ ಶುಬ್‌ಮನ್ ಗಿಲ್ 754 ರನ್ ಗಳಿಸಿದರೆ, ಮೊಹಮ್ಮದ್ ಸಿರಾಜ್ 23 ವಿಕೆಟ್ ಪಡೆದುಕೊಳ್ಳುವ ಮೂಲಕ ಸರಣಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಹಾಗೂ ವಿಕೆಟ್ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ.
ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಶಾಕ್: ರಜೆ ಹಾಗೂ ವಾರದ ರಜೆ ರದ್ದು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


